ಸೋಮವಾರ, ಡಿಸೆಂಬರ್ 6, 2021
23 °C

ಜಿಕೆವಿಕೆ ಸೆಕ್ಯೂರಿಟಿ ಗಾರ್ಡ್ ಹತ್ಯೆ ಮಾಡಿದ್ದವರ ಬಂಧನ: ಬಂಧಿತರು ಅಪ್ರಾಪ್ತರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಭದ್ರತಾ ಸಿಬ್ಬಂದಿ ದೀಪಕ್‌ಕುಮಾರ್ (46) ಎಂಬುವರನ್ನು ಅವರ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರನ್ನು ಯಲಹಂಕ ನ್ಯೂ ಟೌನ್‌ ಪೊಲೀಸರು ಬಂಧಿಸಿದ್ದಾರೆ. 

‘ಬಿಹಾರದ ದೀಪಕ್‌ಕುಮಾರ್‌, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆ ವೀರ್‌ಸಾಗರ್‌ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಹೋದ ಭಾನುವಾರ ತಡರಾತ್ರಿ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು, ದೀಪಕ್‌ ಮೇಲೆ ದಾಳಿ ಮಾಡಿದ್ದರು. ಮಕ್ಕಳ ಎದುರೇ ಅವರನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದರು.

ಬಂಧಿತರೆಲ್ಲಾ ಅ‍ಪ್ರಾಪ್ತರಾಗಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು