ಬೆಂಗಳೂರು: ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಹಾಗೂ ಭಾರತೀಯ ವಿದ್ಯಾಭವನ ನೀಡುವ 2024ನೇ ಸಾಲಿನ ‘ವಿ.ಕೃ.ಗೋಕಾಕ್ ಪ್ರಶಸ್ತಿ’ಗೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಟ್ರಸ್ಟ್ ಅಧ್ಯಕ್ಷ ನರಹಳ್ಳಿ ಬಾಲಸುಬ್ರಹ್ಮಣ್ಯ, ಕಾರ್ಯದರ್ಶಿ ಅನಿಲ್ ಗೋಕಾಕ್, ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್.ಸುರೇಶ್ ಹಾಗೂ ಅಭಿನವ ರವಿಕುಮಾರ್ ಅವರನ್ನೊಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.
ಇದೇ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.