ಭಾನುವಾರ, ಮೇ 29, 2022
23 °C

ಜನಸಂದಣಿಯಲ್ಲಿ ಬ್ಯಾಗ್‌ಗೆ ಬ್ಲೇಡ್: ₹ 3.57 ಲಕ್ಷ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನಸಂದಣಿಯಲ್ಲಿ ಹೊರಟಿದ್ದ ಆಭರಣ ವ್ಯಾಪಾರಿಯೊಬ್ಬರ ಬ್ಯಾಗ್‌ ಅನ್ನು ಬ್ಲೇಡ್‌ನಿಂದ ಕತ್ತರಿಸಿ ₹ 3.57 ಲಕ್ಷ ನಗದು ಹಾಗೂ 28 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದ್ದು, ಈ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರದ ಎಸ್‌.ಪಿ ರಸ್ತೆಯಲ್ಲಿ ನಡೆದಿರುವ ಕಳ್ಳತನದ ಬಗ್ಗೆ ಚಿಕ್ಕಬಳ್ಳಾಪುರ ನಿವಾಸಿ ಮೆಹರಾಮ್ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ಘಟನಾ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಚಿಕ್ಕಬಳ್ಳಾಪುರದಲ್ಲಿ ಆಭರಣ ಮಳಿಗೆ ಇಟ್ಟುಕೊಂಡಿರುವ ಮೆಹರಾಮ್, ಚಿನ್ನದ ಗಟ್ಟಿಗಳನ್ನು ಖರೀದಿಸಲು ನಗರಕ್ಕೆ ಬಂದಿದ್ದರು. ಪರಿಚಯಸ್ಥರ ಆಭರಣ ಅಂಗಡಿಯತ್ತ ಹೊರಟಿದ್ದರು. ರಸ್ತೆಯಲ್ಲಿ ಜನಸಂದಣಿ ಇತ್ತು. ಅದೇ ಸಂದರ್ಭ ದುಷ್ಕರ್ಮಿಗಳು, ಬ್ಲೇಡ್‌ನಿಂದ ಬ್ಯಾಗ್‌ ಕತ್ತರಿಸಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.