‘ಮದುವೆ ವಾರ್ಷಿಕೋತ್ಸವ ನಿಮಿತ್ತ ದಂಪತಿ ಮನೆಯಿಂದ ಹೊರಗಡೆ ಊಟಕ್ಕೆ ಹೋಗಿದ್ದರು. ಊಟ ಮುಗಿಸಿಕೊಂಡು ರಾತ್ರಿ ವಾಪಸು ಮನೆ ಸಮೀಪದಲ್ಲಿ ಬಂದಿದ್ದರು. ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ಚಾಕು ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ನಂತರ, ಪತ್ನಿಯ 50 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.