ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ದಿದ್ದ ಆರೋಪಿ ಬಂಧನ

Published 3 ಮೇ 2024, 15:54 IST
Last Updated 3 ಮೇ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ಮಹಿಳೆಯೊಬ್ಬರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ದಿದ್ದ ಆರೋಪಿ ರಮೇಶ್ (39) ಎಂಬುವವರನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನಾಗೇಂದ್ರ ಬ್ಲಾಕ್ ನಿವಾಸಿ ರಮೇಶ್, ಏಪ್ರಿಲ್ 19ರಂದು ಕೃತ್ಯ ಎಸಗಿದ್ದ. ಮಹಿಳೆ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಸೆರೆಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಖಾಸಗಿ ಶಾಲೆಯೊಂದರ ಬಸ್‌ ಚಾಲಕನಾಗಿದ್ದ ರಮೇಶ್, ಅದರಿಂದ ಬಂದ ಸಂಬಳದಲ್ಲಿ ಜೀವನ ನಡೆಸುತ್ತಿದ್ದ. ಇತ್ತೀಚೆಗೆ ಆತನನ್ನು ಕೆಲಸದಿಂದ ತೆಗೆಯಲಾಗಿತ್ತು. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿತ್ತು. ಪತ್ನಿ ಸಹ ಜಗಳ ಮಾಡಲಾರಂಭಿಸಿದ್ದರು. ಮಗಳನ್ನು ಶಾಲೆಗೆ ಸೇರಿಸಲು ಹಣ ತರುವಂತೆ ಪತ್ನಿ ಒತ್ತಾಯಿಸಲಾರಂಭಿಸಿದ್ದರು.’

‘ಏಪ್ರಿಲ್ 19ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಹನುಮಂತನಗರ ಬಳಿ ಬಂದಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ. ಕೆಲ ಸುಳಿವು ಆಧರಿಸಿ ತನಿಖೆ ಕೈಗೊಂಡಾಗ ಸಿಕ್ಕಿಬಿದ್ದ. ಮಗಳ ಶಾಲೆ ಪ್ರವೇಶಕ್ಕೆ ಹಣ ಹೊಂದಿಸಲು ಕೃತ್ಯ ಎಸಗಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT