ಆರೋಪಿಯು ಸ್ಕೂಟರ್‌ನಲ್ಲಿ ಸಂಚರಿಸುತ್ತಾ ಒಂಟಿಯಾಗಿ ಓಡಾಡುತ್ತಿದ್ದ ವೃದ್ಧೆಯರನ್ನೇ ಗುರಿಯಾಗಿಸಿ ಮಾಂಗಲ್ಯ ಸೇರಿದಂತೆ ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ. ಇತ್ತೀಚೆಗೆ ಆರ್.ಆರ್. ನಗರದ ಕುವೆಂಪು ವೃತ್ತದಲ್ಲಿ ವೃದ್ಧೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದ. ಆರೋಪಿ ವಿರುದ್ಧ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ