ಗುರುವಾರ , ಮಾರ್ಚ್ 23, 2023
22 °C
₹ 28.73 ಲಕ್ಷ ಮೌಲ್ಯದ ಬಂಗಾರ ವಶ, ಮಹಿಳೆ ಬಂಧನ

ಗುದದ್ವಾರದಲ್ಲಿದ್ದ 532 ಗ್ರಾಂ ಚಿನ್ನ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

‘ಜಿ8–44 ವಿಮಾನದಲ್ಲಿ ಮಾಲ್ಡೀವ್ಸ್‌ನಿಂದ ನಗರಕ್ಕೆ ಬಂದಿದ್ದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರ ಗುದದ್ವಾರದಲ್ಲಿ 532 ಗ್ರಾಂ ಚಿನ್ನ ಪತ್ತೆಯಾಗಿದೆ. ಚಿನ್ನವನ್ನು ಪೇಸ್ಟ್‌ ರೂಪದಲ್ಲಿ ಉಂಡೆಗಳಾಗಿ ಮಾಡಿ, ಗುದದ್ವಾರದಲ್ಲಿ ಇಟ್ಟುಕೊಳ್ಳಲಾಗಿತ್ತು. ಜಪ್ತಿ ಮಾಡಲಾದ ಚಿನ್ನದ ಮೌಲ್ಯ ₹ 28.73 ಲಕ್ಷ’ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ ತಿಳಿಸಿದರು.

‘ವಿಮಾನದ ಮೂಲಕ ಚಿನ್ನ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ, ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿಗೊಳಿಸಲಾಗಿತ್ತು. ಮಾಲ್ಡೀವ್ಸ್‌ನಿಂದ ಬಂದು ನಿಲ್ದಾಣದಿಂದ ಹೊರಬರುತ್ತಿದ್ದ ಮಹಿಳೆ ಬಗ್ಗೆ ಅನುಮಾನ ಬಂದಿತ್ತು’ ಎಂದರು.

‘ಮಹಿಳೆಯ ಬ್ಯಾಗ್ ಹಾಗೂ ದೇಹದ ಹೊರಭಾಗದಲ್ಲಿ ತಪಾಸಣೆ ನಡೆಸಿದಾಗ ಯಾವುದೇ ಚಿನ್ನ ಕಂಡುಬಂದಿರಲಿಲ್ಲ. ಮಹಿಳೆ ವರ್ತನೆಯು ಮತ್ತಷ್ಟು ಅನುಮಾನ ಮೂಡಿಸಿತ್ತು. ಮಹಿಳೆಯನ್ನು ವಶಕ್ಕೆ ಪಡೆದ ಮಹಿಳಾ ಸಿಬ್ಬಂದಿ, ಕೊಠಡಿಗೆ ಕರೆದೊಯ್ದು ಹೆಚ್ಚಿನ ತಪಾಸಣೆ ನಡೆಸಿದ್ದರು. ಅವಾಗಲೇ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡಿದ್ದು ಗೊತ್ತಾಯಿತು’  ಎಂದು ತಿಳಿಸಿದರು.

‘ಚಿನ್ನ ಅಕ್ರಮ ಸಾಗಣೆ ಜಾಲವೊಂದರ ಸದಸ್ಯರಾಗಿ ಮಹಿಳೆ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ. ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿದರು.

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು