ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣದಲ್ಲಿ ₹ 87.56 ಲಕ್ಷ ಮೌಲ್ಯದ ಚಿನ್ನ ಜಪ್ತಿ

Last Updated 28 ನವೆಂಬರ್ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ ₹ 87.56 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ಏರ್ ಇಂಟಲಿಜೆನ್ಸ್ ಅಧಿಕಾರಿಗಳು ನೀಡಿದ್ದ ಸುಳಿವಿನ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು‌.

'ವಸ್ತುವಿನ ಜೊತೆಯಲ್ಲಿ ಚಿನ್ನವನ್ನು ಬಚ್ಚಿಡಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪರಿಶೀಲನೆ ನಡೆಸಿ ಚಿನ್ನ ಪತ್ತೆ ಮಾಡಲಾಗಿದೆ' ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ಹೇಳಿದರು.

'ನ. 27ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಚಿನ್ನ ಸಾಗಣೆ ಮಾಡುತ್ತಿದ್ದ ಎನ್ನಲಾದ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಚಿನ್ನವನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬುದು ವಿಚಾರಣೆಯಿಂದ ತಿಳಿಯಬೇಕಿದೆ' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT