ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧೆಯ ಚಿನ್ನಾಭರಣ ಕಿತ್ತೊಯ್ದಿದ್ದವ ಬಂಧನ

Last Updated 13 ನವೆಂಬರ್ 2022, 20:41 IST
ಅಕ್ಷರ ಗಾತ್ರ

ಬೆಂಗಳೂರು: ವಾಯುವಿಹಾರ ಮಾಡುತ್ತಿದ್ದ ವೃದ್ಧೆಯನ್ನು ತಳ್ಳಿ ಬೀಳಿಸಿ ಚಿನ್ನಾಭರಣ ಕಿತ್ತೊಯ್ದಿದ್ದ ಆರೋಪಿ ಎಚ್. ಸುರೇಶ್ ಅಲಿಯಾಸ್ ಸೂರಿ (21) ಎಂಬುವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.

‘ಹನುಮಂತನಗರ 2ನೇ ಅಡ್ಡರಸ್ತೆಯ ನಿವಾಸಿ ಸುರೇಶ್, ಕೃತ್ಯ ಎಸಗಿ ಪರಾರಿಯಾಗಿದ್ದ. ಈತನನ್ನು ಬಂಧಿಸಿ ₹ 9.07 ಲಕ್ಷ ಮೌಲ್ಯದ 165 ಗ್ರಾಂ ಚಿನ್ನಾಭರಣ, ಎರಡು ದ್ವಿಚಕ್ರ ವಾಹನ ಹಾಗೂ ಚಾಕು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘65 ವರ್ಷದ ವೃದ್ಧೆ ಶಾರದಮ್ಮ, ಮನೆ ಸಮೀಪದ ರಸ್ತೆಯಲ್ಲಿ ನಿತ್ಯವೂ ವಾಯುವಿಹಾರ ಮಾಡುತ್ತಿದ್ದರು. ಅ. 21ರಂದು ಬೆಳಿಗ್ಗೆ 6.45ರ ಸುಮಾರಿಗೆ ಯಥಾಪ್ರಕಾರ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಚಾಕು ತೋರಿಸಿ ವೃದ್ಧೆಯನ್ನು ಬೆದರಿಸಿದ್ದರು.’

‘ವೃದ್ಧೆಯ ಚಿನ್ನದ ಸರ ಕಿತ್ತುಕೊಂಡಿದ್ದ ಆರೋಪಿಗಳು, ಅವರನ್ನು ರಸ್ತೆಯಲ್ಲೇ ತಳ್ಳಿ ಬೀಳಿಸಿದ್ದರು. ನಂತರ, ಸ್ಥಳದಿಂದ ಪರಾರಿಯಾಗಿದ್ದರು. ತೀವ್ರ ಗಾಯಗೊಂಡಿದ್ದ ವೃದ್ಧೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃದ್ಧೆಯ ಮಗಳು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ಪುರಾವೆಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಸರಗಳವು ಮಾತ್ರವಲ್ಲದೇ, ಕೆಲ ಮನೆಗಳಲ್ಲೂ ಆರೋಪಿಗಳು ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT