ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣ ಕದ್ದು ನೇಪಾಳಕ್ಕೆ ಸಾಗಣೆ: ಮೂವರ ಬಂಧನ

Last Updated 25 ಜನವರಿ 2023, 19:01 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವು ಮನೆಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನೇಪಾಳದ ಕರಣ್ ಕಡ್ಕಾ, ಕಿರಣ್ ಕಡ್ಕಾ ಹಾಗೂ ಶಂಕರ್ ಬಂಧಿತರು. ಇವರಿಂದ ₹ 4.20 ಲಕ್ಷ ಮೌಲ್ಯದ 64 ಗ್ರಾಂ ಚಿನ್ನಾಭರಣ ಹಾಗೂ 1.5 ಕೆ.ಜಿ‌ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳು ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಡೆಲಿವರಿ ಬಾಯ್‌ ಸೋಗಿನಲ್ಲಿ ಸುತ್ತಾಡಿ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದರು. ಕದ್ದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ನೇಪಾಳಕ್ಕೆ ಸಾಗಿಸಿ ವಿಲೇವಾರಿ ಮಾಡುತ್ತಿದ್ದರು. ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು’ ಎಂದು ತಿಳಿಸಿದರು.

ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ: ಬೆಂಗಳೂರು, ಕೋಲಾರ ಸೇರಿದಂತೆ ಹಲವೆಡೆ ಮನೆಗಳಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಫಯಾಜ್ ಅಹ್ಮದ್ ಹಾಗೂ ಪ್ರಸಾದ್ ಎಂಬುವರನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

‘ಫಯಾಜ್ ಹಾಗೂ ಪ್ರಸಾದ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದರು. 695 ಗ್ರಾಂ ಚಿನ್ನಾಭರಣ ಹಾಗೂ ಕಾರು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೋಲಾರದಲ್ಲಿರುವ ನ್ಯಾಯಾಧೀಶರ ಮನೆಯೊಂದರಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದರೆಂಬ ಮಾಹಿತಿ ಇದೆ. ಶಿವಮೊಗ್ಗದಲ್ಲಿ ಎಟಿಎಂ ಘಟಕದಲ್ಲಿ ಕಳ್ಳತನ ಮಾಡಲು ಆರೋಪಿಗಳು ಯತ್ನಿಸಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT