ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣ ಕದ್ದು ತವರು ಮನೆಯಲ್ಲಿ ಸಂಗ್ರಹ

Published 3 ಮೇ 2024, 16:30 IST
Last Updated 3 ಮೇ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ಜೆ.ಪಿ. ನಗರ 1ನೇ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ನಡೆದಿದ್ದ ಕಳ್ಳತನ ಸಂಬಂಧ, ಅದೇ ಫ್ಲ್ಯಾಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಮಂಜುಳಾ, 8 ವರ್ಷಗಳಿಂದ ಫ್ಲ್ಯಾಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಹಂತ ಹಂತವಾಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದರು. ಫ್ಲ್ಯಾಟ್‌ ಮಾಲೀಕರಾದ ವೃದ್ಧೆ ಇತ್ತೀಚೆಗೆ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು ಆರೋಪಿಯನ್ನು ಸೆರೆಹಿಡಿಯಲಾಗಿದೆ. ₹34 ಲಕ್ಷ ಮೌಲ್ಯದ ಚಿನ್ನಾಭರಣ, ವಜ್ರದ ಆಭರಣ ಹಾಗೂ ₹1 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರರಾದ ವೃದ್ಧೆ, ಪತಿ ಜೊತೆ ಫ್ಲ್ಯಾಟ್‌ನಲ್ಲಿ ನೆಲೆಸಿದ್ದಾರೆ. ಅವರ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ. ಇದೇ ಫ್ಲ್ಯಾಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ಚಿನ್ನಾಭರಣ ಹಾಗೂ ನಗದು ಬಗ್ಗೆ ತಿಳಿದುಕೊಂಡಿದ್ದರು. ಹಂತ ಹಂತವಾಗಿ ಚಿನ್ನಾಭರಣ ಹಾಗೂ ನಗದು ಕದ್ದೊಯ್ದು, ತಮ್ಮ ತವರು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದರು.’

‘ಮೊಮ್ಮಗನ ನಾಮಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದಕ್ಕೆ ಅಗತ್ಯವಿದ್ದ ನಿಮಿತ್ತ ಚಿನ್ನಾಭರಣ ತೆಗೆದುಕೊಳ್ಳಲು ಕಬೋರ್ಡ್‌ ತೆಗೆದಿದ್ದರು. ಆದರೆ, ಅಲ್ಲಿ ಚಿನ್ನಾಭರಣ ಇರಲಿಲ್ಲ. ಮನೆ ಕೆಲಸದ ಮಹಿಳೆ ಮೇಲೆ ಅನುಮಾನಪಟ್ಟು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಆರೋಪಿ ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತಪ್ಪೊಪ್ಪಿಕೊಂಡರು. ನಂತರ, ತವರು ಮನೆಯಲ್ಲಿದ್ದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ದುಡಿಮೆ ಹಣ ಸಾಲದಿದ್ದರಿಂದ, ಹೆಚ್ಚಿನ ಹಣ ಸಂಪಾದಿಸಲು ಕೃತ್ಯ ಎಸಗಿದ್ದಾಗಿ ಅವರು ಹೇಳಿಕೆ ನೀಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT