ಗುರುವಾರ , ಮಾರ್ಚ್ 23, 2023
30 °C

ಸರಗಳ್ಳರ ಬಂಧನ: ₹12 ಲಕ್ಷದ ಚಿನ್ನಾಭರಣ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳವು ಮಾಡಿದ್ದ ದ್ವಿಚಕ್ರ ವಾಹನಗಳಲ್ಲಿ ಮಹಿಳೆಯರನ್ನು ಹಿಂಬಾಲಿಸಿ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಮುನಿಯಪ್ಪ (27), ಚಂದು (21) ಹಾಗೂ ಜೈಕುಮಾರ್ (28) ಬಂಧಿತರು.

‘ಆರೋಪಿಗಳಿಂದ ₹12.7 ಲಕ್ಷ ಬೆಲೆ ಬಾಳುವ ಆರು ಚಿನ್ನದ ಸರಗಳು, ಚಿನ್ನದ ಬಳೆ ಹಾಗೂ ಕಳವು ಮಾಡಿ ಕೃತ್ಯಕ್ಕೆ ಬಳಸಿಕೊಂಡಿದ್ದ ಮೂರು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳು ಒಂಟಿ ಮಹಿಳೆಯರನ್ನು ಹಿಂಬಾಲಿಸಿ, ಅವರು ಧರಿಸುತ್ತಿದ್ದ ಚಿನ್ನಾಭರಣ ಕದಿಯುತ್ತಿದ್ದರು. ಬಂಧಿತರ ಪೈಕಿ ಮುನಿಯಪ್ಪ 12 ಪ್ರಕರಣಗಳಲ್ಲಿ ಭಾಗಿಯಾಗಿ, ಆರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ. ಚಂದು ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಎರಡು ವರ್ಷ ಜೈಲಿನಲ್ಲಿದ್ದ’. 

‘ಆರೋಪಿಗಳ ಬಂಧನದಿಂದ ಕೋರಮಂಗಲ, ಎಚ್‌ಎಎಲ್, ಅನ್ನಪೂರ್ಣೇಶ್ವರಿ ನಗರ, ವೈಟ್‌ಫೀಲ್ಡ್‌ ಹಾಗೂ ಚನ್ನಮ್ಮನ ಅಚ್ಚುಕಟ್ಟು ಹಾಗೂ ಮಾಲೂರು ಠಾಣೆಗಳಲ್ಲಿ ಸರಗಳ್ಳತನ ಹಾಗೂ ಬೈಕ್ ಕಳವು ಪ್ರಕರಣಗಳು ಪತ್ತೆಯಾಗಿವೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು