ವಾಯುವಿಹಾರದ ವೇಳೆ ಸರಗಳವು: ಇಬ್ಬರ ಬಂಧನ

ಬೆಂಗಳೂರು: ವಾಯುವಿಹಾರಕ್ಕೆ ಬರುವ ಮಹಿಳೆಯರನ್ನು ಹಿಂಬಾಲಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರನ್ನು ರಾಜರಾಜೇಶ್ವರಿ ನಗರದ ಪೊಲೀಸರು ಬಂಧಿಸಿದ್ದಾರೆ.
‘ತಲಘಟ್ಟಪುರ ನಿವಾಸಿಗಳಾದ ರವಿ ಹಾಗೂ ರಾಹುಲ್ ಬಂಧಿತರು. ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಕದ್ದಿದ್ದ ಚಿನ್ನಾಭರಣ, ಬೈಕ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.
‘ಮಂಡ್ಯದ ರವಿ ಕತ್ರಿಗುಪ್ಪೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ. ಇವನಿಗೆ ಪರಿಚಯವಿದ್ದ ರಾಹುಲ್, ನೀರಿನ ಕ್ಯಾನ್‌ಗಳನ್ನು ಪೂರೈಸುವ ಕೆಲಸ ಮಾಡುತ್ತಿದ್ದ. ಲಾಕ್‌ಡೌನ್‌ನಿಂದಾಗಿ ಇಬ್ಬರೂ ನಷ್ಟ ಅನುಭವಿಸಿದ್ದರು. ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಕೃತ್ಯಕ್ಕೆ ಇಳಿದಿದ್ದರು’.
‘ಜೂ. 27ರಂದು ವಿವೇಕಾನಂದ ಪಾರ್ಕ್ ಬಳಿ ಮಹಿಳೆಯೊಬ್ಬರು ವಾಯುವಿಹಾರಕ್ಕೆ ಬಂದಿದ್ದರು. ನಡಿಗೆದಾರರ ಸೋಗಿನಲ್ಲಿ ಬಂದಿದ್ದ ಆರೋಪಿಗಳು, ಆಕೆಯ ಸರ ಕಸಿದು ಬೈಕ್‌ನಲ್ಲಿ ಪರಾರಿಯಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು. ಇವರು ಈ ಹಿಂದೆ ಎಟಿಎಂ ದರೋಡೆಗೂ ಯತ್ನಿಸಿದ್ದರು’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.