ಭಾನುವಾರ, ಮೇ 9, 2021
28 °C

ಮಾಲೀಕರ ಮನೆಯಲ್ಲಿ ಕಳವು: ಮಹಿಳೆ ಸೇರಿ ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಹೋಟೆಲ್ ಮಾಲೀಕರ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಕೆ.ಪಿ.ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಕೆ.ಆರ್‌.ಪುರದ ಅಮರಜ್ಯೋತಿ ನಗರದಲ್ಲಿ ವಾಸವಿದ್ದ ಅನು (45) ಹಾಗೂ ಕಲಬುರ್ಗಿಯ ರೇಣುಕಾನಂದ (31) ಬಂಧಿತರು.

‘ಆರೋಪಿ ಅನು ಕೆ.ಪಿ.ಅಗ್ರಹಾರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮಾಲೀಕರ ಮನೆಗೆ ಹೋಗಿದ್ದಾಗ ಅವರಿಗೆ ಗೊತ್ತಾಗದಂತೆ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಳು. ಬಳಿಕ ತನ್ನ ಸ್ನೇಹಿತ ರೇಣುಕಾನಂದನಿಗೆ ಚಿನ್ನ ನೀಡಿದ್ದಳು. ಆರೋಪಿ ರೇಣುಕಾನಂದ ಕದ್ದ ಚಿನ್ನ ಚಿನ್ನವನ್ನು ಮಾರಾಟ ಮಾಡಿದ್ದ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಗಳಿಂದ ₹1.40 ಲಕ್ಷ ಬೆಲೆಬಾಳುವ 45 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು