ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣ ದರೋಡೆ ಪ್ರಕರಣ | ಮುಂಬೈಗೆ ಪರಾರಿಯಾಗಲು ಯತ್ನಿಸಿದ ಇಬ್ಬರ ಸೆರೆ

Published 14 ಮೇ 2024, 16:11 IST
Last Updated 14 ಮೇ 2024, 16:11 IST
ಅಕ್ಷರ ಗಾತ್ರ

ಬೆಂಗಳೂರು: ಮನೆಯ ಹಿಂಬದಿಯ ಬಾಗಿಲು ಮುರಿದು ಒಳಪ್ರವೇಶಿಸಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆನೇಪಾಳ್ಯ ನಿವಾಸಿ ಅಸ್ಕರ್ ಮೆಹದಿ(30) ಮತ್ತು ನೀಲಸಂದ್ರ ನಿವಾಸಿ ಸಲ್ಮಾನ್ ಖಾನ್(30) ಬಂಧಿತ ಆರೋಪಿಗಳು.

‘ಬಂಧಿತರಿಂದ ₹ 24.43 ಲಕ್ಷ ನಗದು ಮತ್ತು 150 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನೀಲಸಂದ್ರ ನಿವಾಸಿಯೊಬ್ಬರ ಮನೆಯಲ್ಲಿ ಮೇ 7ರಂದು ಕಳವು ನಡೆದಿತ್ತು. ಆರೋಪಿಗಳು ಮನೆಯ ಹಿಂಬದಿ ಬಾಗಿಲು ಮುರಿದು, ಮನೆಗೆ ಒಳಕ್ಕೆ ನುಗ್ಗಿದ್ದರು. ಮನೆಯಲ್ಲೆ ತಡಕಾಡಿ, ಬೀರುವಿನಲ್ಲಿದ್ದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದರು. ಆರೋಪಿಗಳು ಖಾಸಗಿ ಬಸ್ ಮೂಲಕ ಮುಂಬೈಗೆ ಪರಾರಿಯಾಗಲು ಮುಂದಾಗಿದ್ದರು. ಈ ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ 24 ಗಂಟೆಯಲ್ಲೇ ಇಬ್ಬರನ್ನು ಚಿತ್ರದುರ್ಗದಲ್ಲಿ ಬಂಧಿಸಿ, ನಗರಕ್ಕೆ ಕರೆ ತರಲಾಗಿತ್ತು. ಬಳಿಕ 10 ದಿನಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಮನೆ ಕಳವು ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ’

‘ಆರೋಪಿಗಳು ಬೇರೆ ಕಡೆ ಅಡಮಾನ ಇಟ್ಟಿದ್ದ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳು ಕಳ್ಳತವನ್ನೇ ವೃತ್ತಿಯಾಗಿಸಿಕೊಂಡಿದ್ದರು. ಕಳ್ಳತನ ಮಾಡಿ ಸಿಕ್ಕಿದ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT