ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಪೊಲೀಸ್ ಸುವರ್ಣ ಸಂಭ್ರಮ: ಜಾಗೃತಿಗಾಗಿ ಓಟ

Published 10 ಮಾರ್ಚ್ 2024, 16:02 IST
Last Updated 10 ಮಾರ್ಚ್ 2024, 16:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸ್ಥಾಪನೆಯ ಸುವರ್ಣ ಮಹೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ‘ಸುವರ್ಣ ಸಂಭ್ರಮ ಓಟ’ಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಡ್ರಗ್ಸ್ ಹಾಗೂ ಸೈಬರ್ ಅಪರಾಧ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಓಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಬೆಳಿಗ್ಗೆ ಚಾಲನೆ ನೀಡಿದರು. ವಿಧಾನಸೌಧದಿಂದ ಆರಂಭವಾದ 5 ಕಿ.ಮೀ ಹಾಗೂ 10 ಕಿ.ಮೀ ಓಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಡ್ರಗ್ಸ್ ಹಾಗೂ ಸೈಬರ್ ಅಪರಾಧ ಜಾಗೃತಿ ಕುರಿತು ಫಲಕಗಳನ್ನು ಪ್ರದರ್ಶಿಸಿದರು.

5 ಕಿ.ಮೀ ಓಟದಲ್ಲಿ 90 ವರ್ಷ ವಯಸ್ಸಿನ ಜನಾರ್ಧನ್ ಬ್ಯಾಲಹಳ್ಳಿ, 94 ವರ್ಷ ವಯಸ್ಸಿನ ದತ್ತಾತ್ರೇಯ ಹಾಗೂ 74 ವರ್ಷ ವಯಸ್ಸಿನ ಮರಿಯಮ್ಮ ಜಾರ್ಜ್ ಭಾಗವಹಿಸಿ ಜನರ ಗಮನ ಸೆಳೆದರು. ಪೊಲೀಸರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಿಬ್ಬಂದಿ ಹಾಗೂ ಸಾರ್ವಜನಿಕರ ವಿಭಾಗದಲ್ಲಿ ಓಟ ಏರ್ಪಡಿಸಲಾಗಿತ್ತು. ಓಟದಲ್ಲಿ ಕ್ರಮವಾಗಿ ಮೊದಲ, ಎರಡನೇ ಹಾಗೂ ನಾಲ್ಕನೇ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.

ಡ್ರಗ್ಸ್ ಮುಕ್ತ ರಾಜ್ಯ: ಓಟಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ‘ಯುವಕರು ದೇಶದ ಸಂಪತ್ತು. ಆದರೆ, ಇಂದಿನ ಹಲವು ಯುವಕರು ಮಾದಕ ವ್ಯಸನಿಗಳಾಗುತ್ತಿದ್ದಾರೆ. ಇಂಥ ಯುವಕರನ್ನು ರಕ್ಷಿಸಿ, ಜಾಗೃತಿ ವಹಿಸಲು ಜನರು ಸರ್ಕಾರದ ಜೊತೆ ಕೈ ಜೋಡಿಸಬೇಕು. ಡ್ರಗ್ಸ್ ಮುಕ್ತ ರಾಜ್ಯ ಹಾಗೂ ಬೆಂಗಳೂರು ಮಾಡಲು ಸಹಕರಿಸಬೇಕು’ ಎಂದರು.

ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್‌ ಮೋಹನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT