ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹200 ಕೋಟಿ ಅನುದಾನ ನೀಡಿ’

Last Updated 12 ಜೂನ್ 2021, 13:06 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ನಿಂದಾಗಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮುದಾಯದವರಲ್ಲಿ ಶೇ 95ರಷ್ಟು ಮಂದಿ ಬಡವರಾಗಿದ್ದು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ₹200 ಕೋಟಿಗಿಂತಲೂ ಹೆಚ್ಚಿನ ಅನುದಾನ ಒದಗಿಸಿ’ ಎಂದು ಅಖಂಡ ಕರ್ನಾಟಕ ಗೋಂಧಳಿ ಸಮಾಜ ಸಂಘದ ಅಧ್ಯಕ್ಷ ಕೆ.ಎಂ.ಜಯರಾಮಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಅಲೆಮಾರಿ ಸಮುದಾಯವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದೆ. ಈ ಸಮಾಜದ ಅಭಿವೃದ್ಧಿಗಾಗಿ ಸರ್ಕಾರವು2020–2021ನೇ ಸಾಲಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿ₹25 ಕೋಟಿ ಅನುದಾನ ಘೋಷಿಸಿತ್ತು. ಆದರೆ ಈ ವರ್ಷದ ಬಜೆಟ್‌ನಲ್ಲಿ ಕೇವಲ₹29 ಲಕ್ಷ ನೀಡಿರುವುದು ಬೇಸರ ತರಿಸಿದೆ. ಈ ಸಮುದಾಯಕ್ಕೆ ಸೇರಿದ ಅನೇಕ ಕುಟುಂಬಗಳು ಕೋವಿಡ್‌ನಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿವೆ. ಸೋಂಕು ತಗುಲಿದರೆ ಚಿಕಿತ್ಸೆ ಪಡೆಯಲು ಹಣವಿಲ್ಲದೇ ಪರಿತಪಿಸುತ್ತಿವೆ’ ಎಂದು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ನಿಗಮಕ್ಕೆ ಹೆಚ್ಚಿನ ಅನುದಾನ ಪ್ರಕಟಿಸಿದರೆ ಸಮುದಾಯದ ಅರ್ಹ ಫಲಾನುಭವಿಗಳಿಗೆ ಬಡ್ಡಿರಹಿತವಾಗಿ₹5 ಲಕ್ಷದವರೆಗೂ ಸಾಲ ಒದಗಿಸಬಹುದು. ಈ ಹಣದಲ್ಲಿ ಅವರು ಸಣ್ಣಪುಟ್ಟ ವ್ಯಾಪಾರ ಮಾಡಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು. ಮಕ್ಕಳಿಗೂ ಶಿಕ್ಷಣ ಕೊಡಿಸಲು ಅನುಕೂಲವಾಗುತ್ತದೆ’ ಎಂದು ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT