ರಾಜರಾಜೇಶ್ವರಿನಗರ: ‘ಎಲ್ಲ ವರ್ಗದ ಜನರಿಗೆ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ’ ಎಂದು ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್‍ಕುಮಾರ್ ಹೇಳಿದರು.
ಕಾಂಗ್ರೆಸ್ ಉತ್ಸವ ಮತ್ತು ಕಾಂಗ್ರೆಸ್ ಕಚೇರಿ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ನುಡಿದಂತೆ ನಡೆಯುವ ಸರ್ಕಾರವಿದ್ದರೆ ಅದು ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎಂದು ಇಡೀ ಪ್ರಪಂಚವೇ ಹೇಳುತ್ತಿದೆ’ ಎಂದರು.
ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಮಂಜುನಾಥ್ ಮಾತನಾಡಿ, ಉಳುವವನಿಗೆ ಭೂಮಿ, ಉಚಿತ ನಿವೇಶನ, ವಸತಿ, ಭಾಗ್ಯ ಜ್ಯೋತಿ, ಶುದ್ದ ಕುಡಿಯುವ ನೀರು, ನ್ಯಾಯ ಬೆಲೆ ಅಂಗಡಿಗಳನ್ನು ಪ್ರಾರಂಭಿಸುವ ಮೂಲಕ ಬಡವರ ಸೇವೆ ಮಾಡಿದ ಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತವೆ’ ಎಂದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿಗೌಡ ಮಾತನಾಡಿ, ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರಿ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ ನಿರುದ್ಯೋಗ ಸಮಸ್ಯೆ ಸೃಷ್ಟಿಸಿದೆ’ ಎಂದು ದೂರಿದರು.