ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಕೆಲವೆಡೆ ಉತ್ತಮ ಮಳೆ

Published 28 ಜೂನ್ 2024, 16:30 IST
Last Updated 28 ಜೂನ್ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಿವಿಧೆಡೆ ಶುಕ್ರ ವಾರ ಉತ್ತಮ ಮಳೆಯಾಯಿತು. ಕೆಲವು ಪ್ರದೇಶಗಳಲ್ಲಿ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲಿ ನೀರು ಹರಿಯಿತು. ಇದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಯಿತು.

ದೊಡ್ಡನೆಕುಂದಿ ಬ್ರಿಡ್ಜ್,ರೈನ್ಬೋ ಆಸ್ಪತ್ರೆ ಹತ್ತಿರ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಕಸ್ತೂರಿ ನಗರದ ಕಡೆಗೆ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಎಂ.ಜಿ. ರಸ್ತೆ, ಕಬ್ಬನ್‌ ಪಾರ್ಕ್‌, ಆರ್‌.ಟಿ. ನಗರ, ಕೆಂಗೇರಿ, ರಾಜಾಜಿನಗರ, ರಾಜರಾಜೇಶ್ವರಿ ನಗರ, ನಾಯಂಡಹಳ್ಳಿ ಸಹಿತ ನಗರದ ವಿವಿಧೆಡೆ ಮಳೆ ಸುರಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT