ಗುರುವಾರ , ಆಗಸ್ಟ್ 5, 2021
28 °C
ಬಿಬಿಎಂಪಿ ವ್ಯಾಪ್ತಿಯಲ್ಲಿ 1.69 ಲಕ್ಷ ಮಂದಿಗೆ ಲಸಿಕೆ

ಲಸಿಕಾ ಉತ್ಸವಕ್ಕೆ ಉತ್ತಮ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಬಿಎಂಪಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕೋವಿಡ್‌ ಲಸಿಕೆ ಉತ್ಸವಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಈ ಮೊದಲೇ ನಿಗದಿ ಪಡಿಸಿದ್ದ ಎಲ್ಲ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆಯಿಂದಲೇ ಜನರ ಸಾಲು ಕಂಡು ಬಂತು.

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲಾಗುವುದು ಎಂದು ಸರ್ಕಾರ ಮೊದಲೇ ಘೋಷಿಸಿದ್ದರಿಂದ ಯುವಕ–ಯುವತಿಯರು, ಮಧ್ಯವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು. ಲಸಿಕಾ ಅಭಿಯಾನ ಹಮ್ಮಿಕೊಂಡಿರುವ ಬಗ್ಗೆ ಸ್ಥಳೀಯರಿಗೆ ಮುಂಚಿತವಾಗಿಯೇ ಮನೆ ಮನೆ ತೆರಳಿ ಮಾಹಿತಿ ನೀಡಲಾಗಿತ್ತು. ಲಸಿಕೆ ವಿತರಿಸುವ ಕುರಿತು ಕಾರ್ಖಾನೆ, ಹೋಟೆಲ್, ಕಟ್ಟಡ ಮಾಲೀಕರಲ್ಲದೆ, ಇನ್ನಿತರೆ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿತ್ತು.

ಕೆಲವು ಕೇಂದ್ರಗಳಲ್ಲಿ ಅಂತರ ನಿಯಮ ಪಾಲನೆ ಸರಿಯಾಗಿರಲಿಲ್ಲ. ಬಿಬಿಎಂಪಿ ಇಟ್ಟುಕೊಂಡಿದ್ದ ಗುರಿಗಿಂತ ದುಪ್ಪಟ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಯಿತು. ಲಸಿಕೆ ಕೊರತೆ ಕಂಡು ಬರಲಿಲ್ಲ. ಬಹುತೇಕ ಕಡೆ ಹಿರಿಯ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಲಸಿಕಾ ಉತ್ಸವದ ಪ್ರಕ್ರಿಯೆ ಪರಿಶೀಲಿಸಿದರು.

ಸರ್ಕಾರಿ ಕಚೇರಿಗಳು, ಬೀದಿ ಬದಿ ವ್ಯಾಪಾರಿಗಳು, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ, ಕ್ಯಾಬ್/ಆಟೊ ಚಾಲಕರು, ಎಪಿಎಂಸಿ ಮಾರುಕಟ್ಟೆಯಲ್ಲಿನ ವರ್ತಕರು, ಬ್ಯಾಂಕ್ ಸಿಬ್ಬಂದಿ, ಹೋಟೆಲ್ ಸಿಬ್ಬಂದಿ, ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನಿತರೆ ಕಡೆ ಪಾಳಿಯಂತೆ ಲಸಿಕೆ ನೀಡಲಾಯಿತು.

ವೈದ್ಯರು, ಶುಶ್ರೂಷಕರು, ಅಶಾ ಕಾರ್ಯಕರ್ತೆಯರು, ಹೋಂ ಗಾರ್ಡ್‌ಗಳು, ಮಾರ್ಷಲ್‌ಗಳು ಲಸಿಕೆ ಕಾರ್ಯಕ್ರಮ ನಿರ್ವಹಿಸಿದರು.

 1.69 ಲಕ್ಷ ಲಸಿಕೆ:

ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಒಟ್ಟು 65 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ 1,68,958 ಮಂದಿಗೆ ಲಸಿಕೆ ನೀಡಲಾಯಿತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು