ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ’

Published 17 ಮೇ 2023, 20:41 IST
Last Updated 17 ಮೇ 2023, 20:41 IST
ಅಕ್ಷರ ಗಾತ್ರ

ಕೆ.ಆರ್.ಪುರ: ಯುವಕರು ಕ್ರೀಡೆಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳುವುದರಿಂದ ದೇಹದ ಸದೃಢತೆ ಹಾಗೂ ಮನಸ್ಸಿನ ಮೇಲೆ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದು ಗೋಪಾಲನ್ ಸಮೂಹ ವಿದ್ಯಾಸಂಸ್ಥೆಯ ಅಧ್ಯಕ್ಷೆ ಸುನೀತಾ ಪ್ರಭಾಕರ್ ಹೇಳಿದರು.

ಸಮೀಪದ ಹೂಡಿಯ ಗೋಪಾಲನ್ ಸ್ಕೂಲ್ ಆಫ್ ಪ್ಲಾನಿಂಗ್ ಆರ್ಕಿಟೆಕ್ಚರ್ ಕಾಲೇಜಿನಲ್ಲಿ ಉದ್ಯಥಮ್ ಕ್ರೀಡಾ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ವಿದ್ಯಾರ್ಥಿಗಳು ಮೊಬೈಲ್‌ಗೆ ಅವಲಂಬಿತರಾಗಿ ಕ್ರೀಡೆ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ಕ್ರೀಡಾ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಬುದ್ದಿಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು. ಕ್ರೀಡೆ ಆಡುವುದರಿಂದ ದೇಹ, ಮನಸ್ಸು ಸದೃಢಗೊಳ್ಳುವುದರ ಜೊತೆಗೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಹೆಚ್ಚೆಚ್ಚು ಕ್ರೀಡೆಯಲ್ಲಿ ತೊಡಗಿಕೊಳ್ಳಿ ಎಂದು ಹೇಳಿದರು.

ಪ್ರಾಂಶುಪಾಲ ಡಾ.ವಿಮಲಸ್ವಾಮಿ ಇದ್ದರು. ನಗರದ ಹದಿನೆಂಟಕ್ಕೂ ಹೆಚ್ಚು ವಾಸ್ತುಶಿಲ್ಪ ಕಾಲೇಜು ವಿದ್ಯಾರ್ಥಿಗಳು ಕ್ರೀಡಾ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಕ್ರಿಕೆಟ್, ಥ್ರೋಬಾಲ್, ಫುಟ್‌ಬಾಲ್‌, ಚೇಸ್ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT