ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಅನ್ಯಾಯ: ಎಚ್‌.ಕೊಟ್ರೇಶ್‌

Last Updated 3 ಜುಲೈ 2021, 15:57 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ1,242 ಸಹಾಯಕ ಪ್ರಾಧ್ಯಾಪಕರು ಹಾಗೂ310 ಪ್ರಾಂಶುಪಾಲರನ್ನು ನೇಮಿಸಲು ಸರ್ಕಾರ ನಿರ್ಧರಿಸಿದೆ. ಆ ಮೂಲಕ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಅನ್ಯಾಯವೆಸಗಿದೆ’ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಎಚ್‌.ಕೊಟ್ರೇಶ್‌ ಆರೋಪಿಸಿದ್ದಾರೆ.

‘ಅನೇಕರು15, 20 ವರ್ಷಗಳಿಂದ ಕಡಿಮೆ ಗೌರವಧನ ಪಡೆದು ಕೆಲಸ ಮಾಡಿದ್ದಾರೆ. ಸೇವಾ ಭದ್ರತೆ ಇಲ್ಲದೆಯೇ ದುಡಿದು ಈಗ ನಿವೃತ್ತಿಯ ಅಂಚಿನಲ್ಲಿದ್ದಾರೆ. ಇವರಿಗೆ ಸಾಕಷ್ಟು ಬೋಧನಾ ಅನುಭವ ಇದೆ. ಸರ್ಕಾರದ ನಿರ್ಧಾರದಿಂದಾಗಿ ಇವರೆಲ್ಲಾ ಅರ್ಜಿ ಸಲ್ಲಿಸುವುದರಿಂದ ವಂಚಿತರಾಗಿದ್ದಾರೆ’ ಎಂದಿದ್ದಾರೆ.

‘ರಾಜ್ಯದ430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ14,447 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ತಮ್ಮನ್ನು ಕಾಯಂಗೊಳಿಸಲಿದೆ ಎಂದು ಅನೇಕರು ಕನಸು ಕಂಡಿದ್ದರು. ಅವರಿಗೆಲ್ಲಾ ನಿರಾಸೆಯಾಗಿದೆ. ಕೋವಿಡ್‌ ಸಮಯದಲ್ಲಿ ಅತಿಥಿ ಉಪನ್ಯಾಸಕರಿಗೆ ಕೆಲಸವೇ ಇಲ್ಲದಾಗಿದೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಹಲವರು ತರಕಾರಿ ಮಾರುತ್ತಿದ್ದಾರೆ. ಗಾರೆ ಕೆಲಸ, ಹೋಟೆಲ್‌ ಹಾಗೂ ಬಾರ್‌ಗಳಲ್ಲಿ ಮಾಣಿಗಳಾಗಿಯೂ ಕೆಲಸ ಮಾಡುತ್ತಿದ್ದಾರೆ. ಕೋವಿಡ್‌, ಹೃದಯಾಘಾತ ಹಾಗೂ ಮೂತ್ರಪಿಂಡದ ವೈಫಲ್ಯದಿಂದ 50ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಕಾಲಿಕ ಮರಣ ಹೊಂದಿದವರ ಕುಟುಂಬಕ್ಕೆ ಸರ್ಕಾರ ಯಾವುದೇ ಪರಿಹಾರ ಒದಗಿಸಿಲ್ಲ. ಸಾಂತ್ವನ ಹೇಳುವ ಗೋಜಿಗೂ ಹೋಗಿಲ್ಲ. ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಬೇಡಿಕೆ ಈಡೇರಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT