ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

150 ಐಟಿಐಗಳ ಉನ್ನತೀಕರಣ, ಟಾಟಾ ಟೆಕ್ನಾಲಜೀಸ್‌ ಜತೆ ಸರ್ಕಾರದ ಒಪ್ಪಂದ

Last Updated 6 ನವೆಂಬರ್ 2020, 10:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ 150 ಸರ್ಕಾರಿ ಕೈಕಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ಟಾಟಾ ಟೆಕ್ನಾಲಜೀಸ್ ಜತೆ ಶುಕ್ರವಾರ ಒಪ್ಪಂದ ಮಾಡಿಕೊಂಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತಿಯಲ್ಲಿ ಟಾಟಾ ಟೆಕ್ನಾಲಜೀಸ್‌ ಅಧ್ಯಕ್ಷ ಆನಂದ್ ಭಡೆ ಮತ್ತು ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಒಪ್ಪಂದಕ್ಕೆ ಸಹಿ ಹಾಕಿದರು.

ಒಪ್ಪಂದದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, '₹ 4,636 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ಬರಲಿದೆ. ಟಾಟಾ ಟೆಕ್ನಾಲಜೀಸ್‌ ₹ 4,080 ಕೋಟಿ ವೆಚ್ಚ ಮಾಡಲಿದೆ. ರಾಜ್ಯ ಸರ್ಕಾರ ₹ 566 ಕೋಟಿ ಭರಿಸಲಿದೆ. ಐಟಿಐಗಳ ಮೂಲಸೌಕರ್ಯ ಅಭಿವೃದ್ಧಿಗೆ ₹ 105 ಕೋಟಿ ಸರ್ಕಾರ ವೆಚ್ಚ ಮಾಡಲಿದೆ' ಎಂದರು.

ಎಲ್ಲ ಜಿಲ್ಲೆಗಳಲ್ಲಿ ಸರ್ಕಾರಿ ಐಟಿಐಗಳನ್ನು ಆಯ್ಕೆಮಾಡಿ ಉನ್ನತೀಕರಿಸಲಾಗುವುದು. ಟಾಟಾ ಟೆಕ್ನಾಲಜೀಸ್‌ ಜತೆ 20 ಕೈಗಾರಿಕಾ ಪಾಲುದಾರರು ಪಾಲ್ಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT