ಮಂಗಳವಾರ, ಜನವರಿ 19, 2021
19 °C

‘ಶಾಲೆ ತೆರೆಯದಿರುವುದು ಮಕ್ಕಳ ವಿರೋಧಿ ನಿರ್ಧಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಶಾಲೆಗಳನ್ನು ತೆರೆಯದಿರುವ ಸರ್ಕಾರದ ನಿರ್ಧಾರ ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆ ಹಾಗೂ ಮಕ್ಕಳ ವಿರೋಧಿ ನಿರ್ಧಾರ’ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಅಭಿಪ್ರಾಯಪಟ್ಟಿದ್ದಾರೆ.

‘ಸರ್ಕಾರದ ಈ ನಿರ್ಧಾರ ತುಂಬಾ ದುರದೃಷ್ಟಕರ. ಬಡ ಮತ್ತು ಹಿಂದುಳಿದ ಸಮುದಾಯಗಳು ಮತ್ತು ಅವರ ಮಕ್ಕಳ ಹಿತಾಸಕ್ತಿ ಹಾಗೂ ಬೆಳವಣಿಗೆಗೆ ವಿರುದ್ಧದ ನಿರ್ಧಾರವಾಗಿದೆ. ಜೊತೆಗೆ, ಮುಖ್ಯಮಂತ್ರಿಯವರು ಶಿಕ್ಷಣ ಸಚಿವರನ್ನು ಮೂಲೆಗುಂಪು ಮಾಡುವ ಮೂಲಕ ಎಲ್ಲ ನಿರ್ಧಾರಗಳನ್ನು ಅವರೇ ಏಕೆ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಇದರ ಹಿಂದಿರುವ ಒತ್ತಡ ಯಾವುದು ಎಂಬುದು ದೊಡ್ಡ ರಹಸ್ಯವಾಗಿದೆ’ ಎಂದಿದ್ದಾರೆ.

‘ಮಕ್ಕಳ ಹಕ್ಕುಗಳನ್ನು ಎತ್ತಿಹಿಡಿಯುವ ಮತ್ತು ರಕ್ಷಿಸುವ ಪ್ರಾಥಮಿಕ ಬಾಧ್ಯತೆಯನ್ನು ಹೊಂದಿರುವ ರಾಜ್ಯ ಸರ್ಕಾರವೇ ‘ಮಕ್ಕಳ ಹಿತಾಸಕ್ತಿಗೆ’ ವಿರುದ್ಧವಾದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ, ಜೀತ ಪದ್ಧತಿ ಮತ್ತು ಮಕ್ಕಳ ಕಳ್ಳ ಸಾಗಣೆಗೆ ಉತ್ತೇಜನ ನೀಡುವ ನೀತಿ ಅನುಸರಿಸಲು ಹೊರಟಿರುವುದು ಖಂಡನೀಯ. ರಾಜ್ಯ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು