ಶನಿವಾರ, ಫೆಬ್ರವರಿ 22, 2020
19 °C
ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ

ಪಿಂಚಣಿ ಸೌಲಭ್ಯಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 3 ಸಾವಿರದಷ್ಟು ನೌಕರರು ಕೆಲಸ ಮಾಡುತ್ತಿದ್ದು, ಅವರಿಗೆ ಪಿಂಚಣಿ ಸೌಲಭ್ಯವನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಲಾಗಿದೆ.

ಶನಿವಾರ ಇಲ್ಲಿ ನಡೆದ ಕರ್ನಾಟಕ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮೊದಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

‘ನೂತನ ಪಿಂಚಣಿ ಯೋಜನೆಗೆ ಬಜೆಟ್‌ನಲ್ಲಿ ಹಣ ಹೊಂದಿಸಲು ಸಾಧ್ಯವಿಲ್ಲ, ಆಯಾ ಸಂಸ್ಥೆಗಳ ಸಂಪನ್ಮೂಲದಲ್ಲೇ ಹಣ ಹೊಂದಿಸಿಕೊಂಡು ಎನ್‌ಪಿಎಸ್‌ ಆರಂಭಿಸಲು ಸರ್ಕಾರ ಸೂಚಿಸಿದೆ. ಆದರೆ ಹಲವು ಸಂಸ್ಥೆಗಳಲ್ಲಿ ಸಂಪನ್ಮೂಲದ ಕೊರತೆ ಇದೆ, ಇಂತಹ ಕ್ರಮ ಕೈಗೊಂಡರೆ ರೋಗಿಗಳ ಮೇಲೆ ಹೊರೆ ಬೀಳುವ ಸಾಧ್ಯತೆಯೂ ಇರುತ್ತದೆ. ಹೀಗಾಗಿ ಸರ್ಕಾರವೇ ಈ ಯೋಜನೆಗೆ ಬಜೆಟ್‌ ನಿಗದಿಪಡಿಸಿ ಜಾರಿಗೆ ತರಬೇಕು. 14 ವರ್ಷಗಳಿಂದ ಮಾಡುತ್ತಿರುವ ಈ ಒತ್ತಾಯವನ್ನು ಈಡೇರಿಸಬೇಕು’ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಅಧ್ಯಕ್ಷ ಡಾ.ಎ.ಎ.ನದಾಫ್‌ ಅಧ್ಯಕ್ಷತೆ ವಹಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು