ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಕಾಲಮಿತಿಯನ್ನು ವಿಸ್ತರಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ಪತ್ರ ಬರೆದಿದೆ.

ಮುಖ್ಯ ಕಾರ್ಯದರ್ಶಿಯವರಿಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಜಗದೀಶ್ ಅವರು, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್. ಹೊನ್ನಾಂಬ ಅವರಿಗೆ ಏಪ್ರಿಲ್ 15ರಂದು ಪತ್ರ ಬರೆದು, ನಗರ ಪಾಲಿಕೆಗಳ ಚುನಾವಣೆಗೆ ಸಮರ್ಪಕವಾಗಿ ಸಿದ್ಧತೆ ನಡೆಸಬೇಕಾಗಿರುವುದರಿಂದ ಕಾಲಮಿತಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸುವಂತೆ ಸೂಚಿಸಿದ್ದಾರೆ.

‘ಜಿಬಿಎ ವ್ಯಾಪ್ತಿಯಲ್ಲಿ ಜನಗಣತಿ ಕಾರ್ಯ ನಡೆಯುತ್ತಿದ್ದು, ಇಡೀ ಆಡಳಿತ ಮತ್ತು ಕ್ಷೇತ್ರಮಟ್ಟದ ಯಂತ್ರವು ಅದರಲ್ಲಿ ತೊಡಗಿಕೊಂಡಿದೆ. ಈ ಚಟುವಟಿಕೆಗಳು ಶಾಸನಬದ್ಧ ಮತ್ತು ಸಮಯಕ್ಕೆ ಸೀಮಿತವಾಗಿರುವುದರಿಂದ ಎಣಿಕೆ, ಮೇಲ್ವಿಚಾರಣೆ, ತರಬೇತಿ ಮತ್ತು ಸಂಪರ್ಕಕ್ಕಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವ ಅಗತ್ಯವಿದೆ. ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವ ಸಿದ್ಧತಾ ಕಾರ್ಯಗಳಿಗೆ ಸೀಮಿತ ಅವಕಾಶವಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಸಹ ಏಕಕಾಲದಲ್ಲಿ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಜೊತೆಗೆ ಮೇ, ಜೂನ್ನಲ್ಲಿ ಶೈಕ್ಷಣಿಕ ಪರೀಕ್ಷಾ ಕರ್ತವ್ಯಗಳಿಗೆ ಸಿಬ್ಬಂದಿ ನಿಯೋಜಿಸುವುದರಿಂದ ಲಭ್ಯವಿರುವ ಸಿಬ್ಬಂದಿ ಮತ್ತಷ್ಟು ಕಡಿತವಾಗುವ ಸಾಧ್ಯತೆ ಇದೆ’ ಎಂದು ಜಿಬಿಎ ಮುಖ್ಯ ಆಯುಕ್ತರು, ಮುಖ್ಯ ಕಾರ್ಯದರ್ಶಿಯವರಿಗೆ ಏಪ್ರಿಲ್ 8ರಂದು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಈ ಹಿನ್ನೆಲೆಯಲ್ಲಿ ಆಡಳಿತ ಯಂತ್ರ ಜನಗಣತಿ ಕಾರ್ಯಾಚರಣೆಯಲ್ಲಿ ತೊಡಗಿರುವುದರಿಂದ, ಎಸ್ಐಆರ್ ಪ್ರಕ್ರಿಯೆಯೂ ಆರಂಭವಾಗುವುದರಿಂದ ನಗರ ಪಾಲಿಕೆಗಳ ಚುನಾವಣೆಯ ಕಾಲಮಿತಿಯನ್ನು ವಿಸ್ತರಿಸಬೇಕು’ ಎಂದು ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಗೂ ಜಿಬಿಎ ಮುಖ್ಯ ಆಯುಕ್ತರು ಏಪ್ರಿಲ್ 6ರಂದು ಇದೇ ರೀತಿಯ ಪತ್ರ ಬರೆದಿದ್ದಾರೆ.

ಸೂಚನೆ: ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿ ಅಧಿಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ಗೆ ಏಪ್ರಿಲ್ 14ರಂದು ಪ್ರಮಾಣಪತ್ರ ಸಲ್ಲಿಸಿತ್ತು.

‘ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಅಗತ್ಯವಾದ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಆಯೋಗಕ್ಕೆ ವಾರ್ಡ್ವಾರು ಮೀಸಲಾತಿ ಅಗತ್ಯವಿಲ್ಲ. ರಾಜ್ಯ ಚುನಾವಣಾ ಆಯೋಗ ಮಾರ್ಚ್ 16ರೊಳಗೆ ವಾರ್ಡ್ವಾರು ಮತದಾರರ ಪಟ್ಟಿ ಪ್ರಕಟಿಸಬೇಕಾಗಿತ್ತು. ಚುನಾವಣೆ ಪ್ರಕ್ರಿಯೆಗೆ ತಡೆಯಾಗದಂತೆ ವಾರ್ಡ್ ಮೀಸಲಾತಿ ಸೇರಿದಂತೆ ಎಲ್ಲ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದೆ’ ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪ್ರಮಾಣಪತ್ರದಲ್ಲಿ ತಿಳಿಸಿದ್ದರು.

ನಗರಾಭಿವೃದ್ಧಿ ಇಲಾಖೆ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಆದರೆ ಈವರೆಗೆ ಸಲ್ಲಿಸಿಲ್ಲ ಎನ್ನಲಾಗಿದೆ.

ಮಾರ್ಚ್ 9ರಂದು ಮತದಾರರ ಪರಿಷ್ಕೃತ ಕರಡು ಪಟ್ಟಿಯನ್ನು ಪ್ರಕಟಿಸಿ, ಮಾರ್ಚ್ 30ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿತ್ತು. ವೇಳಾಪಟ್ಟಿ ಪ್ರಕಾರ ಏಪ್ರಿಲ್ 18ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಬೇಕು. ಜಿಬಿಎ ಮುಖ್ಯ ಆಯುಕ್ತರು, ಶನಿವಾರ ಮಧ್ಯಾಹ್ನ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.