ಶನಿವಾರ, ಏಪ್ರಿಲ್ 17, 2021
32 °C
ವಿದ್ಯಾಶಿಲ್ಪ ಕಮ್ಯುನಿಟಿ ಟ್ರಸ್ಟ್‌ನಿಂದ ಕಾರ್ಯಕ್ರಮ

21 ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ರಾಜ್ಯ ಸರ್ಕಾರದ ಅನುಮತಿ ದೊರೆತರೆ ₹1.20 ಕೋಟಿ ವೆಚ್ಚದಲ್ಲಿ ಬ್ಯಾಟರಾಯನಪುರ ಸರ್ಕಾರಿ ಶಾಲೆಯ ನೂತನ ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದು ಉದ್ಯಮಿಪಿ. ದಯಾನಂದ ಪೈ ಹೇಳಿದರು.

ಬ್ಯಾಟರಾಯನಪುರದ ಸ.ಹಿ.ಪ್ರಾ. ಶಾಲೆಯಲ್ಲಿ ಆಯೋಜಿಸಿದ್ದ ‘ವಿದ್ಯಾಶಿಲ್ಪ ಕಮ್ಯುನಿಟಿ ಟ್ರಸ್ಟ್‌ನಿಂದ 21 ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದದರು.

‘ಹಲವು ವರ್ಷಗಳ ಹಿಂದೆಯೇ ನೂತನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ
ದಿಂದ ಯೋಜನೆ ನನೆಗುದಿಗೆ ಬಿದ್ದಿತ್ತು. ಈಗಲೂ ಅನುಮತಿ ನೀಡಿದರೆ ಕಟ್ಟಡ ನಿರ್ಮಿಸಿ, ಮೂಲಸೌಕರ್ಯ ಒದಗಿಸಲಾಗುವುದು’ ಎಂದರು.

ಟ್ರಸ್ಟ್‌ ಸಂಸ್ಥಾಪಕ ಕಿರಣ್ ಪೈ, ‘ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯ ಒದಗಿಸಬೇಕೆಂಬ ಉದ್ದೇಶದಿಂದ ಟ್ರಸ್ಟ್ ದತ್ತು ಪಡೆದಿದ್ದು, ಅವುಗಳ ಅಭಿವೃದ್ಧಿಗೆ ಶ್ರಮಿಸಲಿದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.