ಸೋಮವಾರ, ಅಕ್ಟೋಬರ್ 25, 2021
25 °C

ರೈತರಿಗೆ ನೆರವು: 2 ಲಕ್ಷ ಅಕ್ರಮ ವಿದ್ಯುತ್‌ ಸಂಪರ್ಕ ಸಕ್ರಮಕ್ಕೆ ಸರ್ಕಾರ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್ಥಿಕವಾಗಿ ಹೊರೆಯಾದರೂ ರೈತರ 2 ಲಕ್ಷಕ್ಕೂ ಹೆಚ್ಚು ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕವನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ವಿಧಾನಸಭೆಯಲ್ಲಿ ಇಂಧನ ಸಚಿವ ವಿ. ಸುನೀಲ್‌ಕುಮಾರ್‌ ನೀಡಿರುವ ಮಾಹಿತಿ ಪ್ರಕಾರ, 2.57 ಲಕ್ಷ ಪಂಪ್‌ಸೆಟ್‌ಗಳ ವಿದ್ಯುತ್‌ ಸಂಪರ್ಕವನ್ನು ಸಕ್ರಮಗೊಳಿಸುವಂತೆ ಅರ್ಜಿ ಸಲ್ಲಿಕೆಯಾಗಿದ್ದು, ವಿಲೇವಾರಿಗೆ ಬಾಕಿ ಇವೆ. ಈ ವರ್ಷ 22,897 ಅಕ್ರಮ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದೆ.

‘ವಿವಿಧ ವಿದ್ಯುತ್‌ ಪೂರೈಕೆ ಕಂಪನಿಗಳ ವ್ಯಾಪ್ತಿಯಲ್ಲಿ 2018ರಿಂದ 2020ರ ಮಧ್ಯೆ 4.41 ಲಕ್ಷ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲಾಗಿದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲಾಗಿದೆ. ಅಕ್ರಮ ಸಂಪರ್ಕದಿಂದ ಭಾರಿ ನಷ್ಟವಾಗುತ್ತಿ‌ದೆ. ಹೀಗಾಗಿ, ಅವುಗಳನ್ನು ಸಕ್ರಮಗೊಳಿಸಲು ಚಿಂತನೆ ನಡೆದಿದೆ‘ ಎಂದು ಇಂಧನ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ... ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ: ಬೊಮ್ಮಾಯಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು