ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪತ್‍ರಾಜ್ ಪರಾರಿಗೆ ಸರ್ಕಾರದ ಶ್ರೀರಕ್ಷೆ: ಎಎಪಿ

Last Updated 31 ಅಕ್ಟೋಬರ್ 2020, 19:56 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯ ರೂವಾರಿ ಸಂಪತ್ ರಾಜ್ ತಲೆಮರೆಸಿಕೊಳ್ಳಲು ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಶ್ರೀರಕ್ಷೆಯೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ವಿ,' ಮಾಜಿ ಮೇಯರ್ ಆಗಿರುವ ಸಂಪತ್‍ರಾಜ್ ಅವರೇ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ರೂವಾರಿ ಎಂದು ಸಿಸಿಬಿ ಚಾರ್ಜ್‍ಶೀಟ್ ಸಲ್ಲಿಸಿದರೂ, ಅವರನ್ನು ಬಂಧಿಸದಂತೆ ಒತ್ತಡ ಹೇರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಈ ಘಟನೆಯ ಹೊಣೆ ಹೊರಬೇಕು. ರಾಜಕೀಯ ಒತ್ತಡದಿಂದ ಸಮಾಜ ಘಾತುಕ ವ್ಯಕ್ತಿಯನ್ನು ರಕ್ಷಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸ್ಪಷ್ಟನೆ ನೀಡಬೇಕು' ಎಂದು ಆಗ್ರಹಿಸಿದರು.

'ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಕೋಮು ದ್ವೇಷದಿಂದ ಜನರನ್ನು ಎತ್ತಿಕಟ್ಟಿದ ವ್ಯಕ್ತಿಯನ್ನು ಬಂಧಿಸದಿರಲು ಡಿ.ಕೆ.ಶಿವಕುಮಾರ್ ಹಾಗೂ ಯಡಿಯೂರಪ್ಪ ನಡುವಿನ ಸ್ನೇಹವೇ ಕಾರಣ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT