ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

Last Updated 28 ಮೇ 2020, 20:01 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಬಿಡಿಎ ಕಾಯ್ದೆ ತಿದ್ದುಪಡಿಗಾಗಿ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ಮನೆ ನಿರ್ಮಿಸಿ 12 ವರ್ಷ ಆಗಿದ್ದರೆ ಮಾತ್ರ ಸಕ್ರಮಕ್ಕೆ ಅವಕಾಶ ನೀಡಲಾಗುತ್ತದೆ. ಇದಕ್ಕೆ ಆಯಾ ಜಾಗದ ಮಾರ್ಗಸೂಚಿ ದರದ ಪ್ರಕಾರ ದಂಡನಾ ಶುಲ್ಕ ಪಾವತಿಸಬೇಕಾಗುತ್ತದೆ. ನಗರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಒಟ್ಟು 6,000 ಎಕರೆ ಪ್ರದೇಶದಲ್ಲಿ 75,000 ಮನೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಅಂದಾಜು ಇದೆ.

12 ವರ್ಷಗಳಿಂದ ಈಚೆಗೆ ಮನೆ ನಿರ್ಮಿಸಿದ್ದರೆ ಈ ಯೋಜನೆ ಅನ್ವಯವಾಗುವುದಿಲ್ಲ. ಇಂತಹವರ ವಿರುದ್ಧಇನ್ನೆರಡು ವರ್ಷಗಳಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಡಿಎ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ನಿರ್ಮಾಣವಾಗಿರುವ ಬಡಾವಣೆಗಳಲ್ಲಿರುವ ಖಾಲಿ ನಿವೇಶನಗಳನ್ನು ಬಿಡಿಎ ವಶಕ್ಕೆ ತೆಗೆದುಕೊಂಡು, ಮುಂದಿನ ದಿನಗಳಲ್ಲಿ ಹರಾಜು ಹಾಕಲಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT