ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಿಂದರಾಜ ನಗರ: ಕಸ ವಿಲೇವಾರಿಗೆ ಹೊಸ ಮಾದರಿ

Last Updated 15 ಸೆಪ್ಟೆಂಬರ್ 2020, 11:30 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವುದಕ್ಕೆ ಹೊಸ ವ್ಯವಸ್ಥೆಯನ್ನು ಬಿಬಿಎಂಪಿ ಅಳವಡಿಸಲಿದೆ. ಹಸಿ ಕಸ, ಒಣ ಕಸ ಹಾಗೂ ನೈರ್ಮಲ್ಯ (ಸ್ಯಾನಿಟರಿ) ಕಸಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡುವುದನ್ನು ಗೋವಿಂದರಾಜನಗರ ವಾರ್ಡ್‌ನಲ್ಲಿ ಮಂಗಳವಾರದಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರು ಕಸ ವಿಲೇವಾರಿಯ ಹೊಸ ವಿಧಾನ ಅಳವಡಿಕೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ವಾರ್ಡ್‌ ಅನ್ನು 12 ಘಟಕಗಳನ್ನಾಗಿ (ಬ್ಲಾಕ್‌) ವಿಂಗಡಿಸಲಾಗಿದೆ. ಈ ಎಲ್ಲ ಘಟಕಗಳಲ್ಲೂ ಮನೆಮನೆಯಿಂದ ಕಸ ಸಂಗ್ರಹಿಸುವುದಕ್ಕೆ ಸಮಯ ನಿಗದಿಪಡಿಸಲಾಗಿದ್ದು, ಅದಕ್ಕೆ ಅನುಗುಣವಾಗಿ ನಿತ್ಯವೂ ಹಸಿ ಹಾಗೂ ನೈರ್ಮಲ್ಯ ಕಸಗಳನ್ನು ನಿತ್ಯವೂ ಸಂಗ್ರಹಿಸಲಾಗುತ್ತದೆ.ಒಣ ಕಸವನ್ನು ವಾರದಲ್ಲಿ ಎರಡು ಬಾರಿ ಸಂಗ್ರಹಿಸಲಾಗುತ್ತದೆ.

ಹಸಿ, ಒಣ ಮತ್ತು ನೈರ್ಮಲ್ಯ ಕಸಗಳನ್ನು ಸರಿಯಾಗಿ ವಿಂಗಡಿಸುವಂತೆ ವಾರ್ಡ್‌ನ ನಿವಾಸಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ವಾರ್ಡ್‌ನಲ್ಲಿ ಇನ್ನೂ ಮೂರು ತಿಂಗಳುಗಳ ಒಳಗೆ ಕಸ ವಿಂಗಡಣೆಯಲ್ಲಿ ಶೇ 100ರಷ್ಟು ಸಾಧನೆ ಮಾಡಬೇಕು. ವಾರ್ಡ್‌ನಲ್ಲಿ ಎಲ್ಲೂ ಕಸದ ರಾಶಿಗಳು (ಬ್ಲಾಕ್‌ ಸ್ಪಾಟ್‌) ಕಂಡುಬರಬರದಂತೆ ನೋಡಿಕೊಳ್ಳಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಒಮ್ಮೆ ಮಾತ್ರ ಬಳಸಿ ಬಿಸಾಡುವ ಪ್ಲಾಸ್ಟಿಕ್ ಬಳಕೆ ಮೇಲಿನ ನಿಷೇಧವನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ವಾಣಿಜ್ಯ ಮಳಿಗೆಗಳೂ ಇಂಥಹವುಗಳನ್ನು ಬಳಸುತ್ತಿದ್ದರೆ ಅಥವಾ ಮಾರಾಟ ಮಾಡುತ್ತಿದ್ದರೆ ಪತ್ತೆ ಹಚ್ಚಿ ದಂಡಿ ವಿಧಿಸುವಂತೆಯೂ ಆಯುಕ್ತರು ಸೂಚಿಸಿದ್ದಾರೆ.

ಕಸ ವಿಂಗಡಣೆಯನ್ನು ಸಮರ್ಪಕವಾಗಿ ಮಾಡದವರಿಗೆ ದಂಡ ವಿಧಿಸುವ ಅಧಿಕಾರವನ್ನು ಕಿರಿಯ ಆರೊಗ್ಯ ಪರಿವೀಕ್ಷಕರಿಗೆ ಹಾಗೂ ಮಾರ್ಷಲ್‌ ಸಿಬ್ಬಂದಿಗೆ ವಹಿಸಲಾಗಿದೆ.

ಕಸ ವಿಲೇವಾರಿಗೆ ಆಟೊ ಟಿಪ್ಪರ್‌ಗಳನ್ನು ಬಳಸಲಾಗುತ್ತಿದೆ. ಕಸ ವಿಲೇವಾರಿ ಮೇಲೆ ನಿಗಾ ಇಡುವುದಕ್ಕಾಗಿ ಈ ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ. ವಾಹನಗಳಲ್ಲಿ ಆಯಾ ಬ್ಲಾಕ್‌ಗಳ ಸಂಖ್ಯೆಯನ್ನೂ ನಮೂದಿಸಲಾಗುತ್ತದೆ.

ಆಟೊ ಟಿಪ್ಪರ್‌ಗಳ ಚಾಲಕರು, ಸಹಾಯಕರು ಸೇರಿದಂತೆ ಕಸ ವಿಲೇವಾರಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಸಿಬ್ಬಂದಿ ಸಮವಸ್ತ್ರಗಳನ್ನು ಹಾಗೂ ಎಲ್ಲರೀತಿಯ ಸುರಕ್ಷತಾ ಪರಿಕರಗಳನ್ನು ಧರಿಸಿರಬೇಕು ಎಂದು ಸೂಚಿಸಲಾಗಿದೆ. ಮಸ್ಟರಿಂಗ್‌ ಕೇಂದ್ರಗಳಲ್ಲಿ ಬಯೋಮೆಟ್ರಿಕ್‌ ವಿಧಾನದ ಮೂಲಕವೇ ಹಾಜರಾತಿ ಹಾಕುವುದು ಕಡ್ಡಾಯ. ಕಸ ವಿಲೇವಾರಿ ಸಿಬ್ಬಂದಿಗೆ ಕಾರ್ಯನಿರ್ವಹಣೆ ಆಧಾರದಲ್ಲಿ ಸಮಯಕ್ಕೆ ಸರಿಯಾಗಿ ಪಾವತಿ ಮಾಡಬೇಕು ಎಂದೂ ಆಯುಕ್ತರು ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT