ಬುಧವಾರ, ಅಕ್ಟೋಬರ್ 28, 2020
29 °C

ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಎಲ್‌. ಹನುಮಂತಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವು ನಾಗರಿಕ ಸಮಾಜ ತಲೆತಗ್ಗಿಸುವ ಹೇಯ ಕೃತ್ಯ’ ಎಂದು ರಾಜ್ಯಸಭಾ ಸದಸ್ಯ ಎಲ್‌. ಹನುಮಂತಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 

‘ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಯುವತಿಯನ್ನು ನೋಡಲು ಕುಟುಂಬದ ಸದಸ್ಯರಿಗೆ ಅಧಿಕಾರಿಗಳು ಹಾಗೂ ಪೊಲೀಸರು ಅವಕಾಶ ನೀಡಲಿಲ್ಲ. ಅವರ ಅನುಪಸ್ಥಿತಿಯಲ್ಲಿಯೇ ಅಂತ್ಯಸಂಸ್ಕಾರ ಮಾಡಿರುವುದು ಹಲವು ಅನುಮಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಅಧಿಕಾರಿಗಳು ಮತ್ತು ಪೊಲೀಸರ ಮೇಲೆ ಸರ್ಕಾರವು ಕ್ರಮಕೈಗೊಳ್ಳಬೇಕು. ಈ ಘಟನೆಯನ್ನು ಜಾತ್ಯತೀತವಾಗಿ ಎಲ್ಲರೂ ಖಂಡಿಸಬೇಕು’ ಎಂದು ತಿಳಿಸಿದ್ದಾರೆ.

‘ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ಇಂತಹ ಸರಣಿ ಅತ್ಯಾಚಾರಗಳು, ಕೊಲೆಗಳು ನಡೆಯುತ್ತಿದ್ದರೂ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೂಡಲೇ ರಾಷ್ಟ್ರಪತಿಗಳು ಸರ್ಕಾರವನ್ನು ವಜಾ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.