ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಫೆ. 7ರಂದು ಸರ್ಕಾರಿ ನೌಕರರ ಪ್ರತಿಭಟನೆ

Published 5 ಫೆಬ್ರುವರಿ 2024, 14:44 IST
Last Updated 5 ಫೆಬ್ರುವರಿ 2024, 14:44 IST
ಅಕ್ಷರ ಗಾತ್ರ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆ (ಓಪಿಎಸ್‌) ಮರು ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 7ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಮತ್ತು ಇಲಾಖಾ ಹಾಗೂ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ಸಮನ್ವಯ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ. ಶಿವಶಂಕರ್, ‘ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ ಎಲ್ಲ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಬೇಕು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ, ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.

‘ಕೋವಿಡ್‌ ನೆಪದಲ್ಲಿ ತಡೆಹಿಡಿದಿರುವ 18 ತಿಂಗಳ ತುಟ್ಟಿಭತ್ಯೆ ಕೂಡಲೇ ಬಿಡುಗಡೆಗೊಳಿಸಬೇಕು. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲಿನ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಶೀಘ್ರ ಪರಿಷ್ಕರಣೆ ಮಾಡಿ, ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು ಹಾಗೂ ನಿಯಮಾನುಸಾರ ಪದೋನ್ನತಿ ನೀಡಬೇಕು. ಆಡಳಿತ ಸುಧಾರಣೆ ನೆಪದಲ್ಲಿ ಇಲಾಖೆಗಳ ವಿಲೀನ, ನೌಕರರ ಸಂಖ್ಯೆ ಕಡಿತ, ಸಾರ್ವಜನಿಕ ಉದ್ದಿಮೆಗಳ, ಸರ್ಕಾರದ ಯೋಜನೆಗಳನ್ನು ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್‌ಡಿಎ) ಕಾಯ್ದೆ ಸೇರಿದಂತೆ ಕೇಂದ್ರ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 16ರಂದು ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಕರೆದಿರುವ ರಾಷ್ಟ್ರೀಯ ಮುಷ್ಕರಕ್ಕೆ ಬೆಂಬಲ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT