ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ 30 ಮತ್ತು 31 ಹಾಗೂ ಜೂನ್ 1ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ರಾಜ್ಯದ ಹತ್ತು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಈ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕ್ರೀಡಾಪಟುಗಳಿಗೆ ಗುಣಮಟ್ಟದ ಟ್ರ್ಯಾಕ್‌ಸೂಟ್ ಮತ್ತು ಕ್ಯಾಪ್ ನೀಡಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಈ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಜಿಐಡಿ ಇಲಾಖೆಯ ಆನ್‌ಲೈನ್ ಸೇವೆ ಹಾಗೂ ಎಸ್‌ಎಂಎಸ್ ಮೂಲಕ ನೌಕರರ ಮಾಸಿಕ ವೇತನ ಭತ್ಯೆಗಳ ಮಾಹಿತಿ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೇ 30ರಂದು ಸಂಜೆ 7ಕ್ಕೆ ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. 31ರಂದು ಜನಪದೋತ್ಸವ ಕಾರ್ಯಕ್ರಮ ನಡೆಯಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.