ಬೆಂಗಳೂರು: ‘ಮುಂದಿನ ವರ್ಷ ಜನವರಿಯಲ್ಲಿ ಅವಧಿ ಪೂರ್ಣಗೊಳ್ಳಲಿರುವ 5,950 ಗ್ರಾಮ ಪಂಚಾಯತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ಅಂತಿಮ ಮೀಸಲಾತಿಯ ಅಧಿಸೂಚನೆ ಹೊರಡಿಸಲು ತಕ್ಷಣವೇ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ‘ಇದೊಂದು ಗಂಭೀರ ವಿಷಯವಾಗಿದ್ದು, ಸರ್ಕಾರದಿಂದ ಅಗತ್ಯ ಮಾಹಿತಿಗಳನ್ನು ಪಡೆದು ಎರಡು ವಾರಗಳಲ್ಲಿ ನ್ಯಾಯಾಲಯಕ್ಕೆ ತಿಳಿಸಬೇಕು’ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.