ಮೀನುಕುಂಟೆ ಹೊಸೂರು ಗ್ರಾಮ: ಇಬ್ಬರು ಅವಿರೋಧ ಆಯ್ಕೆ
ಯಲಹಂಕ: ಜಾಲಾ ಹೋಬಳಿಯ ಮೀನುಕುಂಟೆ ಹೊಸೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೈನಹಳ್ಳಿ ಗ್ರಾಮದ ಶುಭ ನರಸಿಂಹಮೂರ್ತಿ (ಎಸ್.ಸಿ) ಹಾಗೂ ಸೌಮ್ಯ.ವಿ (ಸಾಮಾನ್ಯ) ಅವಿರೋಧವಾಗಿ ಆಯ್ಕೆಯಾಗಿರುವ ಸದಸ್ಯರು.
ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಒಟ್ಟು 21 ಸದಸ್ಯರ ಬಲ ಅಗತ್ಯವಿರುವ ಗ್ರಾಮ ಪಂಚಾಯಿತಿಗೆ 94 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ 46 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.