ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಪ್‌ಕಾಮ್ಸ್‌: ಇಂದಿನಿಂದ ದ್ರಾಕ್ಷಿ–ಕಲ್ಲಂಗಡಿ ಮೇಳ

Last Updated 21 ಫೆಬ್ರುವರಿ 2023, 16:28 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿರುವ ಎಲ್ಲ ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಫೆ.22ರಿಂದ ರಿಯಾಯಿತಿ ದರದಲ್ಲಿ ದ್ರಾಕ್ಷಿ ಮತ್ತು ಕಲ್ಲಂಗಡಿ ಮಾರಾಟ ಮೇಳ ಆಯೋಜಿಸಲಾಗಿದೆ’ ಎಂದು ಹಾಪ್‌ಕಾಮ್ಸ್‌ನ ಅಧ್ಯಕ್ಷ ಎನ್‌. ದೇವರಾಜ್‌ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪ್ರತಿವರ್ಷದಂತೆ ಈ ಬಾರಿಯೂ ಶೇ 10ರಷ್ಟು ರಿಯಾಯಿತಿ ದರದಲ್ಲಿ ದ್ರಾಕ್ಷಿ ಮತ್ತು ಕಲ್ಲಂಗಡಿ ಮಾರಾಟ ಮೇಳ ನಡೆಯಲಿದೆ. 13ರಿಂದ 15 ತಳಿಯ ದ್ರಾಕ್ಷಿ ಹಾಗೂ 3–4 ತಳಿಯ ಕಲ್ಲಂಗಡಿ ಮೇಳದಲ್ಲಿ ಇರಲಿವೆ. 500 ಟನ್ ದ್ರಾಕ್ಷಿ ಹಾಗೂ 1,000 ಟನ್ ಕಲ್ಲಂಗಡಿ ಮಾರಾಟ ಮಾಡುವ ಗುರಿ ಇದೆ’ ಎಂದರು.

ಇಂದು ಮೇಳ ಉದ್ಘಾಟನೆ: ‘ಹಾಪ್‌ಕಾಮ್ಸ್‌ನ ಎಲ್ಲ ಮಳಿಗೆಗಳಲ್ಲಿ ಫೆ. 22ರಿಂದ ಮೇಳ ಆರಂಭಗೊಳ್ಳಲಿದೆ. ಲಾಲ್‌ಬಾಗ್‌ ಬಳಿಯ ಎಂ.ಎಚ್.ಮರಿಗೌಡ ರಸ್ತೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಮೇಳಕ್ಕೆ ತೋಟಗಾರಿಕೆ ಸಚಿವ ಮುನಿರತ್ನ ಚಾಲನೆ ನೀಡಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT