‘ಬಿಜೆಪಿ ಅವಧಿಯ ಕೆಲಸಗಳೇ ಶ್ರೀರಕ್ಷೆ’
ಬಿಜೆಪಿ ಆಡಳಿತದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ನೀಡಿದ ಆದ್ಯತೆ ಅನುದಾನ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ವರದಾನವಾಗಿವೆ. ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕಾರಿಯಾಗಲಿವೆ ಎಂದು ವಿಜಯೇಂದ್ರ ಹೇಳಿದರು. ‘ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ನಗರದ ರಸ್ತೆ ಗುಂಡಿ ಘನತ್ಯಾಜ್ಯ ವಿಲೇವಾರಿ ಸಮಸ್ಯೆಗಳನ್ನು ಜನರ ಮುಂದಿಟ್ಟು ಮತ ಕೇಳುತ್ತೇವೆ. ರಾಜ್ಯ ಸರ್ಕಾರದ ವೈಫಲ್ಯ ಬಿಜೆಪಿಯ ಗೆಲುವಿನ ದಾರಿಯನ್ನು ಸುಗಮಗೊಳಿಸಲಿದೆ’ ಎಂದರು.