ಬೆಂಗಳೂರು: ಹಿಂದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ಣಗೊಳಿಸಿರುವ ಕಾಮಗಾರಿಗಳ ಬಾಕಿ ಬಿಲ್ ₹1,700 ಕೋಟಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವತಿಯಿಂದಲೇ ಪಾವತಿಸಬೇಕು ಎಂದು ಗ್ರೇಟರ್ ಬೆಂಗಳೂರು ನಗರ ಪಾಲಿಕೆಗಳ ಗುತ್ತಿಗೆದಾರರ ಸಂಘ (ಜಿಬಿಸಿಸಿಎ) ಒತ್ತಾಯಿಸಿದೆ.

‘ಬಿಬಿಎಂಪಿ ಅನುದಾನದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ 26 ತಿಂಗಳಿಂದ ಬಾಕಿ ಇದೆ. ಸರ್ಕಾರದ ಅನುದಾನದಿಂದ ಕೈಗೊಂಡಿರುವ ಕಾಮಗಾರಿಗಳ ಬಿಲ್ ಕೂಡ ಬಾಕಿ ಉಳಿದಿದೆ. ಇದೆಲ್ಲವನ್ನೂ ಜಿಬಿಎಯಿಂದ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಆಗ್ರಹಿಸಿದರು.

‘ರಾಜ್ಯ ಗುತ್ತಿಗೆದಾರರ ಸಂಘ ಮಾರ್ಚ್ 6ರಂದು ಹಮ್ಮಿಕೊಂಡಿರುವ ಮುಷ್ಕರದಲ್ಲಿ ನಮ್ಮ ಸಂಘದ ಎಲ್ಲರೂ ಭಾಗವಹಿಸಲಿದ್ದೇವೆ. ಜಿಬಿಎ ವ್ಯಾಪ್ತಿಯಲ್ಲಿ ಅಂದು ಯಾವ ಕಾಮಗಾರಿಯೂ ನಡೆಯುವುದಿಲ್ಲ’ ಎಂದು ತಿಳಿಸಿದರು.

‘ಐದು ವರ್ಷಗಳ ಹಿಂದೆ ನಡೆಸಿರುವ ಕಾಮಗಾರಿಗಳಿಗೆ ನೀಡಲಾಗಿದ್ದ ಶೇ 10ರಷ್ಟು ಭದ್ರತಾ ಠೇವಣಿಯನ್ನು ಬಿಲ್ ಪಾವತಿ ಸಂದರ್ಭದಲ್ಲಿ ಹಿಂದಿರುಗಿಸಿಲ್ಲ. ಇತ್ತೀಚಿನ ದಿನಗಳಲ್ಲಿ ಎಲ್ಲ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ಪದ್ಧತಿಯಲ್ಲಿ ಟೆಂಡರ್ ಕರೆಯುತ್ತಿದ್ದಾರೆ. ಇದರಿಂದ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ತೊಂದರೆಯಾಗಿದೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಚೇತನ್ ಕುಮಾರ್ ಹೇಳಿದರು.

‘ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (ಕೆಆರ್ಐಡಿಎಲ್) ವತಿಯಿಂದ ನಿರ್ವಹಿಸಿರುವ ಕಾಮಗಾರಿಯ ಬಿಲ್ನಲ್ಲಿ ಶೇ 25ರಷ್ಟನ್ನು ಬಾಕಿ ಉಳಿಸಿಕೊಳ್ಳಲಾಗಿದ್ದು, ಅದನ್ನು ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಕಾಮಗಾರಿ ಮುಗಿದು ವರ್ಷಗಳೇ ಕಳೆದರೂ ಬಿಲ್ ಪಾವತಿಸಿಲ್ಲ. ಹೀಗಾಗಿ ರಾಜ್ಯ ಗುತ್ತಿಗೆದಾರರ ಸಂಘದೊಂದಿಗೆ ನಾವು ಪ್ರತಿಭಟನೆ ನಡೆಸಲಿದ್ದೇವೆ
–ಜಿ.ಎಂ. ನಂದಕುಮಾರ್, ಅಧ್ಯಕ್ಷ ಗ್ರೇಟರ್ ಬೆಂಗಳೂರು ನಗರ ಪಾಲಿಕೆಗಳ ಗುತ್ತಿಗೆದಾರರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.