ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 503 ಸುಸ್ತಿದಾರರಿಂದ ₹135.69 ಕೋಟಿ ಹಾಗೂ 509 ಆಸ್ತಿ ತೆರಿಗೆ ಪರಿಷ್ಕರಣೆ ಪ್ರಕರಣಗಳಿಂದ ₹394.44 ಕೋಟಿ ಸೇರಿ ಒಟ್ಟು ₹530.14 ಕೋಟಿ ಬಾಕಿ ಉಳಿದಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು.

ಹೆಚ್ಚು ಬಾಕಿ ಹೊಂದಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಂದ ಬಾಕಿ ತೆರಿಗೆಯನ್ನು ತ್ವರಿತಗತಿಯಲ್ಲಿ ಸಂಗ್ರಹಿಸಲು ಸಂಬಂಧಿತ ನಗರ ಪಾಲಿಕೆಗಳ ವಲಯಗಳ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಆಯಾ ನಗರ ಪಾಲಿಕೆಗಳಲ್ಲಿ 50 ಪ್ರಮುಖ ಸುಸ್ತಿದಾರರು ಹಾಗೂ 50 ಪರಿಷ್ಕರಣೆ ಪ್ರಕರಣಗಳ ಪಟ್ಟಿಯನ್ನು ಜಿಬಿಎ ಜಾಲತಾಣದಲ್ಲಿ (https://gba.karnataka.gov.in) ಅಪ್ಲೋಡ್ ಮಾಡಲಾಗಿದೆ. ಆಸ್ತಿ ಮಾಲೀಕರು ಕೂಡಲೇ ಬಾಕಿ ತೆರಿಗೆಯನ್ನು ಪಾವತಿಸಿ, ಮುಂದಾಗುವ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.