ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಜನಗಣತಿ ಆರಂಭವಾಗಿದ್ದು, ಪ್ರತಿ 200 ಮನೆಗೆ ಒಬ್ಬ ಗಣತಿದಾರನ್ನು ನಿಯೋಜಿಸಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಭಾಗವಾಗಿ ಮೊದಲ ಹಂತದಲ್ಲಿ ‘ಮನೆ ಪಟ್ಟಿ ಮತ್ತು ಮನೆಗಳ ಗಣತಿ’ ಕಾರ್ಯ ಏಪ್ರಿಲ್ 16ರಿಂದ ಮೇ 15 ರವರೆಗೆ ನಡೆಯಲಿದೆ. ಗಣತಿದಾರರು ಜನಗಣತಿ ಕಾರ್ಯಕ್ಕಾಗಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಾಗರಿಕರು ಸಿಬ್ಬಂದಿಗೆ ಸಹಕಾರ ನೀಡಿ, ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದರೆ 5-8 ನಿಮಿಷಗಳಲ್ಲಿ ಮನೆ ಗಣತಿ ಕಾರ್ಯ ಪೂರ್ಣಗೊಳ್ಳಲಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾಹಿತಿ ನೀಡಿದರು.

ಮನೆ ಪಟ್ಟಿ ಮತ್ತು ಮನೆಗಳ ಗಣತಿ ಕಾರ್ಯಕ್ಕಾಗಿ 23,000ಕ್ಕೂ ಹೆಚ್ಚು ಗಣತಿದಾರರು ಮತ್ತು ಸುಮಾರು 2,500 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಈ ಕಾರ್ಯ ಮುಗಿದ ನಂತರ ಎರಡನೇ ಹಂತದಲ್ಲಿ ಏಪ್ರಿಲ್ 2027ರಲ್ಲಿ ಜನಗಣತಿ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.

ಮನೆ ಗಣತಿ ಕಾರ್ಯದಲ್ಲಿ 10,000 ಶಿಕ್ಷಕರನ್ನು ನಿಯೋಜಿಸಲಾಗಿದೆ. ಗಂಭೀರ ಆರೋಗ್ಯ ಸಮಸ್ಯೆಯಿರುವವರು, ಗರ್ಭಿಣಿಯರು, ಅಂಗವಿಕಲರು, ಒಂದು ವರ್ಷದೊಳಗಿನ ಮಕ್ಕಳಿರುವ ತಾಯಂದಿರು ಹಾಗೂ ಇತರ ಕಾರಣಗಳಿಂದ ಸುಮಾರು 8 ಸಾವಿರ ಸಿಬ್ಬಂದಿಗೆ ವಿನಾಯಿತಿ ನೀಡಲಾಗಿದೆ ಎಂದು ವಿವರಿಸಿದರು.

ಮನೆಗೆ ಸ್ಟಿಕ್ಕರ್: ಗಣತಿದಾರರು ಮನೆ-ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ, ಮನೆಯಲ್ಲಿ ಯಾರೂ ಇಲ್ಲದಿದ್ದರೆ ಮನೆ ಮುಂದೆ ಸ್ಟಿಕ್ಕರ್ ಅಂಟಿಸಿ, ಅದರಲ್ಲಿ ಮೊಬೈಲ್ ಸಂಖ್ಯೆ ನಮೂದಿಸಲಾಗುವುದು. ನಂತರ ಸಂಬಂಧಪಟ್ಟ ಚಾರ್ಜ್ ಅಧಿಕಾರಿ ಅಥವಾ ಗಣತಿದಾರರಿಗೆ ಕರೆ ಮಾಡಿದರೆ ಮನೆಗೆ ಪುನಃ ಬಂದು ಗಣತಿ ಕಾರ್ಯ ನಡೆಸಲಾಗುತ್ತದೆ ಎಂದು ಹೇಳಿದರು.

ಹೆಚ್ಚುವರಿ ಅವಧಿ: ಗಣತಿದಾರರು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಮನೆ-ಮನೆಗೆ ಭೇಟಿ ನೀಡಿ ಮನೆ ಗಣತಿ ಕಾರ್ಯ ನಡೆಸಲಿದ್ದಾರೆ. ಒಂದು ವಾರದ ನಂತರ ಮುಂಜಾನೆ 6ರಿಂದ ಬೆಳಿಗ್ಗೆ 10 ಹಾಗೂ ಸಂಜೆ 6 ರಿಂದ ರಾತ್ರಿ 9ರವರೆಗೆ ಗಣತಿ ಕಾರ್ಯ ನಡೆಸಲಾಗುತ್ತದೆ. ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.