ಶನಿವಾರ, ನವೆಂಬರ್ 28, 2020
24 °C

ಹಸಿರು ಪಟಾಕಿ ಬಳಕೆ: ಮಾರ್ಗಸೂಚಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಪ್ರೀಂ ಕೋರ್ಟ್‌ ನೀಡಿದ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ‘ಹಸಿರು ಪಟಾಕಿ’ಗಳನ್ನು ಮಾತ್ರ ಹಚ್ಚಬೇಕು ಎಂದು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಹಸಿರು ಪಟಾಕಿ ಮಾರಾಟ ಮಾಡಬಹುದು. ನ. 7ರಿಂದ 11ರವರೆಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು ಎಂದು ಮಾರ್ಗ
ಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಂಬಂಧಪಟ್ಟ ಇಲಾಖೆ ನಿಗದಿ ಪ‍ಡಿಸಿದ ಸ್ಥಳದಲ್ಲಿ ಮತ್ತು ದಿನಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ಮಳಿಗೆಗಳನ್ನು ತೆರೆದು ಹಸಿರು ಪಟಾಕಿ ಮಾರಾಟ ಮಾಡಬೇಕು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನಗಳಲ್ಲಿ ಅಥವಾ ಬಯಲು ಪ್ರದೇಶಗಳಲ್ಲಿ ಮಳಿಗೆ ತೆರೆಯಲು ಅನುಮತಿ ಪಡೆಯಬೇಕು. ಎರಡು ಪಟಾಕಿ ಮಾರಾಟ ಮಳಿಗೆಗಳ ಮಧ್ಯೆ 6 ಮೀಟರ್‌ ಅಂತರ ಇರಬೇಕು ಮತ್ತು ಗಾಳಿಯಾಡುವಂತೆ ಇರಬೇಕು. ಪರವಾನಗಿಯನ್ನು ಸಾರ್ವಜನಿಕ ರಿಗೆ ಕಾಣುವಂತೆ ಮಳಿಗೆಯಲ್ಲಿ ಪ್ರದರ್ಶಿ ಸಬೇಕು. ಮಳಿಗೆಗಳ ಸುತ್ತ ನಿತ್ಯ ಸ್ಯಾನಿಟೈಸ್‌ ಮಾಡಬೇಕು. ಪಟಾಕಿ ಖರೀದಿಗೆ ಬರುವ ಗ್ರಾಹಕರಿಗೆ ಕನಿಷ್ಠ 6 ಅಡಿ ಅಂತರ ಗುರುತಿಸಬೇಕು ಎಂದೂ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು