ಯಲಹಂಕ: ವೆಂಕಟಾಲದಲ್ಲಿರುವ ಅಭಯ ಮಹಾಗಣಪತಿ ದೇವಾಲಯದ 13ನೇ ವಾರ್ಷಿಕೋತ್ಸವ ಪ್ರಯುಕ್ತ ನವೆಂಬರ್ 8 ಮತ್ತು 9ರಂದು ಕಡಲೆಕಾಯಿ ಪರಿಷೆಯನ್ನು ಆಯೋಜಿಸಲಾಗಿದೆ.

ಪರಿಷೆಯಲ್ಲಿ ಕಡಲೆಕಾಯಿಯನ್ನು ರಾಶಿ ಹಾಕಿ ವ್ಯಾಪಾರ ಮಾಡುವ ಪ್ರತಿಯೊಬ್ಬರಿಗೂ ₹500 ಪ್ರೋತ್ಸಾಹಧನ ವಿತರಿಸಲಾಗುವುದು. ಅಲ್ಲದೆ ವ್ಯಾಪಾರಿಗಳಿಗೆ ಕಾಫಿ, ಉಪಾಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆಂಪೇಗೌಡ ತಿಳಿಸಿದ್ದಾರೆ.

ಪರಿಷೆಯಲ್ಲಿ ಗೃಹೋಪಯೋಗಿ ವಸ್ತು, ಕೃತಕ ಆಭರಣ, ಮಕ್ಕಳ ಆಟಿಕೆಗಳು, ಮಣ್ಣಿನಿಂದ ತಯಾರಿಸಿದ ಮಡಕೆಗಳು, ತಿಂಡಿ-ತಿನಿಸುಗಳು ಸೇರಿದಂತೆ ವೈವಿಧ್ಯಮಯ ವಸ್ತುಗಳ ಮಾರಾಟವೂ ಇರಲಿದೆ. ಮಕ್ಕಳು ಮತ್ತು ಪೋಷಕರ ಮನರಂಜನೆಗಾಗಿ ಆಟಗಳಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾಹಿತಿಗಾಗಿ 9980196440/9632365956 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.