ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ತುಂಬಿಸಿದ ಜಲಮಂಡಳಿ

ಅಂತರ್ಜಲ ಮರುಪೂರಣಗೊಳಿಸಲು ಕ್ರಮ
Published 24 ಮಾರ್ಚ್ 2024, 14:20 IST
Last Updated 24 ಮಾರ್ಚ್ 2024, 14:20 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರನ್ನು ಹರಿಸುವ ಮೂಲಕ ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಿಸಲು ಜಲಮಂಡಳಿ ಮುಂದಾಗಿದೆ.

‘ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿತ್ತು. ಕೆಲವು ದಿನಗಳ ಹಿಂದೆ ಕೆಂಗೇರಿ ಕೆರೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದೆ. ಕೆರೆಗೆ ನೀರು ಹರಿಸುವ ಪೈಪ್‌ಲೈನ್‌ ಅಳವಡಿಸಲಾಗಿದ್ದು, ಭಾನುವಾರ ನೀರು ಹರಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ’ ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್‌ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದರು.

‘ಜಲಮಂಡಳಿಯ ವತಿಯಿಂದ ಕಡಿಮೆ ಸಮಯದಲ್ಲಿ ಅಗತ್ಯ ಕಾಮಗಾರಿಯನ್ನು ಪೂರೈಸಲಾಗಿದ್ದು, ಬತ್ತಿ ಹೋಗಿದ್ದ ಕೆಂಗೇರಿ ಕೆರೆಗೆ ಮತ್ತೊಮ್ಮೆ ಜೀವ ಜಲ ತುಂಬಿಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕೆರೆ ತುಂಬಲಿದೆ. ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ಸಂಸ್ಕರಿತ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ಜಲಮಂಡಳಿಯ ಗುರಿ‘ ಎಂದು ತಿಳಿಸಿದರು.

‘ನಗರದಲ್ಲಿ ಅವ್ಯಾಹತವಾಗಿ ಅಂತರ್ಜಲ ಬಳಕೆಯಾಗುತ್ತಿದೆ. ಭವಿಷ್ಯದ ನೀರಿನ ಅವಶ್ಯಕತೆ ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಜಲಮಂಡಳಿ ಕೈಗೊಳ್ಳುತ್ತಿದೆ‘ ಎಂದು ರಾಮ್‌ಪ್ರಸಾತ್ ಮನೋಹರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT