ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವೃಂದ, ನೇಮಕಾತಿ ತಿದ್ದುಪಡಿ ಮಾಡಲು ಗಡವು

30 ದಿನಗಳ ಒಳಗೆ ಸರಿಪಡಿಸದಿದ್ದರೆ ಮಹಾನಗರ ಪಾಲಿಕೆ ಕೆಲಸ ಸ್ಥಗಿತ: ನೌಕರರ ಸಂಘ ಎಚ್ಚರಿಕೆ
Published 28 ಡಿಸೆಂಬರ್ 2023, 19:50 IST
Last Updated 28 ಡಿಸೆಂಬರ್ 2023, 19:50 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿ 13 ವರ್ಷಗಳಿಂದ ತಿದ್ದುಪಡಿಯಾಗಿಲ್ಲ. ಇನ್ನು ಒಂದು ತಿಂಗಳ ಒಳಗೆ ಅಂತಿಮಗೊಳಿಸದಿದ್ದರೆ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಕೆಲಸ ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಎಚ್ಚರಿಸಿದೆ.

ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಯನ್ನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ಅವರು ನಗರಾಭಿವೃದ್ದಿ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.

ವೃಂದ ಮತ್ತು ನೇಮಕಾತಿ ನಿಯಮಾವಳಿಯನ್ನು 2011ರಲ್ಲಿ ಅಂತಿಮಗೊಳಿಸಿದ್ದು, ಸರ್ಕಾರ ಆದೇಶದ ಪ್ರಕಾರ ಪ್ರತಿ 3 ವರ್ಷಕ್ಕೊಮ್ಮೆ ವೃಂದ - ನೇಮಕಾತಿ ನಿಯಮಾವಳಿ ರಚಿಸಬೇಕು. ಹಾಗೆ ಮಾಡದೇ ಇರುವುದರಿಂದ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರು ಮುಂಬಡ್ತಿಯಿಂದ ವಂಚಿತರಾಗಿದ್ದಾರೆ. ಎರವಲು ಮೇಲೆ ಕಾರ್ಯನಿರ್ವಹಿಸುತ್ತಿರುವರಿಂದ ಕಾಯಂ ನೌಕರರು ಆಡಳಿತ ಸೌಲಭ್ಯ ಪಡೆಯಲು ವಂಚಿತರಾಗಿದ್ದಾರೆ ಎಂದು ಮನವಿಯಲ್ಲಿ ದೂರಿದ್ದಾರೆ.

ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿ ಕರಡನ್ನು 30 ದಿನಗೊಳಗಾಗಿ ಪ್ರಕಟಿಸಬೇಕು. ಇಲ್ಲದೇ ಇದ್ದರೆ ಮಹಾನಗರ ಪಾಲಿಕೆಗಳ ಎಲ್ಲ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT