ಸೋಮವಾರ, ಆಗಸ್ಟ್ 10, 2020
21 °C

ಬೆಂಗಳೂರು: ಲಕ್ಷಣವಿಲ್ಲದವರಿಗೆ ಗುಂಪು ಮಾದರಿ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಯೋಗಾಲಯಗಳು ವ್ಯಕ್ತಿಯ ಲಕ್ಷಣಗಳನ್ನು ಆಧರಿಸಿ, ವಿವಿಧ ವಿಧಾನಗಳಲ್ಲಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.

ಈ ಸಂಬಂಧ ಆರೋಗ್ಯ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಸೋಂಕು ಲಕ್ಷಣಗಳನ್ನು ಹೊಂದಿರುವವರು ಹಾಗೂ ಸೋಂಕಿತರ ನೇರ ಸಂಪರ್ಕ ಹೊಂದಿರುವವರು ಎ ವರ್ಗದಲ್ಲಿ ಬರಲಿದ್ದು, ಅವರ ವೈಯಕ್ತಿಕ ಪರೀಕ್ಷೆ ನಡೆಸಬೇಕು. ಪ್ರತಿ ಮಾದರಿಯನ್ನೂ ಪ್ರತ್ಯೇಕವಾಗಿ ಪರೀಕ್ಷೆಗೆ ಒಳಪಡಿಸಬೇಕು. ರೋಗ ಲಕ್ಷಣ ಗೋಚರಿಸದವರಿಗೆ, ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹಾಗೂ ಇತರ ವರ್ಗದವರಿಗೆ ಗುಂಪು ಮಾದರಿಯ ಪರೀಕ್ಷಾ ವಿಧಾನವನ್ನು ಅನುಸರಿಸಬೇಕು ಎಂದು ಸೂಚಿಸಿದ್ದಾರೆ. 

ಯಾವುದೇ ವ್ಯಕ್ತಿ ಮೃತಪಟ್ಟಲ್ಲಿ ಹೆಚ್ಚಿನ ಆದ್ಯತೆ ನೀಡಿ, ಪರೀಕ್ಷೆ ನಡೆಸಬೇಕು. ಆದಷ್ಟು ಬೇಗ ವರದಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು