ಬೆಂಗಳೂರು: ‘ವಿಶ್ವವಿದ್ಯಾಲಯಗಳ ಅಧ್ಯಯನ ಪೀಠಗಳು ಮೂಲ ಆಶಯವನ್ನು ಮರೆತು ಅನರ್ಹರ ಪೀಠಗಳಾಗಿ ಮಾರ್ಪಟ್ಟಿವೆ’ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಡಾ.ಜಿಎಸ್ಸೆಸ್ ವಿಶ್ವಸ್ತ ಮಂಡಳಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಪರ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಅವರ ಜತೆಗೆ ‘ಡಾ.ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ’ ಸ್ವೀಕರಿಸಿ, ಮಾತನಾಡಿದರು.

‘ಜಿ.ಎಸ್. ಶಿವರುದ್ರಪ್ಪ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಕನ್ನಡ ವಿಭಾಗವು ಇಡೀ ರಾಜ್ಯಕ್ಕೆ ಮಾದರಿಯಾಗಿತ್ತು. ಬದಲಾದ ಕಾಲಘಟ್ಟದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗವನ್ನು ಗಮನಿಸಿದರೆ ದುಃಖವಾಗುತ್ತದೆ. ಜಿಎಸ್ಎಸ್ ಅವರ ಆಶಯಕ್ಕೆ ವಿರುದ್ಧವಾಗಿ ಅವರ ಶಿಷ್ಯರೇ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಎಲ್ಲ ವಿಭಾಗಗಳು ಜಾತಿಯ ಕೊಂಪೆಗಳು, ಅನರ್ಹರ ಪೀಠಗಳಾಗಿವೆ’ ಎಂದರು.

ಮೀನಾಕ್ಷಿ ಬಾಳಿ, ‘ಇವತ್ತಿನ ಕಾಲದಲ್ಲಿ ಪ್ರಶಸ್ತಿ ಪಡೆಯುವವರಿಗಿಂತ ಪ್ರಶಸ್ತಿ ಕೊಡುವವರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಕೆಲವು ಪ್ರಶಸ್ತಿಗಳು ಮಾತ್ರ ನೈತಿಕತೆ ಮತ್ತು ಮಹತ್ವ ಉಳಿಸಿಕೊಂಡಿವೆ. ಸ್ತ್ರೀಯರಿಗೆ ಗೌರವ ನೀಡಿದ್ದ ಜಿ.ಎಸ್. ಶಿವರುದ್ರಪ್ಪ ಅವರ ಹೆಸರಿನ ಪ್ರಶಸ್ತಿ ಪಡೆದಿರುವುದು ಸಂತೋಷವನ್ನುಂಟು ಮಾಡಿದೆ’ ಎಂದು ಹೇಳಿದ ಅವರು, ಪ್ರಶಸ್ತಿಯ ನಗದು ₹ 15 ಸಾವಿರವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗೆ ನೀಡಿದರು.

ಇದಕ್ಕೂ ಮೊದಲು ವಿಮರ್ಶಕ ದಂಡಪ್ಪ ಅವರು ಜಿ.ಎಸ್. ಶಿವರುದ್ರಪ್ಪ ಅವರ ಬಗ್ಗೆ ಮಾತನಾಡಿದರು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಉಪಾಧ್ಯಕ್ಷೆ ಕೆ.ಎಸ್.ವಿಮಲಾ ಹಾಗೂ ನಾಟಕಕಾರ ಕೆ.ವೈ.ನಾರಾಯಣಸ್ವಾಮಿ ಅವರು ಪ್ರಶಸ್ತಿ ಪುರಸ್ಕೃತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ವಿಮರ್ಶಕ ಬಸವರಾಜ ಕಲ್ಗುಡಿ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.