ಬೆಂಗಳೂರು: ‘ಜಿ.ಎಸ್. ಸಿದ್ಧಲಿಂಗಯ್ಯ ಅವರು ಹಳಗನ್ನಡ, ಹೊಸಗನ್ನಡ, ಪಾಶ್ಚಿಮಾತ್ಯ ಸಾಹಿತ್ಯದ ಸಂಶೋಧನೆ, ವಿಮರ್ಶೆ ಹಾಗೂ ಅನುವಾದ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ್ದರು’ ಎಂದು ಸಾಹಿತಿ ಹಂ.ಪ. ನಾಗರಾಜಯ್ಯ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಡಾ.ಎಸ್. ವಿದ್ಯಾಶಂಕರ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಸೋಮವಾರ ನಡೆದ ಪ್ರೊ.ಜಿ.ಎಸ್. ಸಿದ್ಧಲಿಂಗಯ್ಯ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜಿ.ಎಸ್. ಸಿದ್ಧಲಿಂಗಯ್ಯ ಅವರು ಕುವೆಂಪು ಅವರ ಮೆಚ್ಚಿನ ಶಿಷ್ಯರಾಗುವುದರ ಜೊತೆಗೆ ಉತ್ತಮ ಅಧ್ಯಾಪಕರಾಗಿದ್ದರು. ಅವರ ತರಗತಿಗಳಿಗೆ ವಿದ್ಯಾರ್ಥಿಗಳು ಕಿಕ್ಕಿರಿದು ಸೇರುತ್ತಿದ್ದರು. ಅವರಿಗಿಂತ ಕಿರಿಯನಾದ ನಾನು ಅವರೊಂದಿಗೆ ಸರ್ಕಾರಿ ಕಲಾ ಕಾಲೇಜು ಹಾಗೂ ಇತರೆಡೆ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದೇನೆ’ ಎಂದು ಸ್ಮರಿಸಿದರು.

ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಮಾತನಾಡಿ, ‘ಜಿ.ಎಸ್. ಸಿದ್ಧಲಿಂಗಯ್ಯ ಅವರು ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿಗೆ ಘನತೆ ಮತ್ತು ಗೌರವ ತಂದುಕೊಟ್ಟರು. ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದ ಸಂದರ್ಭದಲ್ಲಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡು, ಅದರ ಶುದ್ಧೀಕರಣ ಮಾಡುವ ಕೆಲಸ ಮಾಡಿದರು’ ಎಂದರು.

ವಿಮರ್ಶಕಿ ಎಂ.ಎಸ್. ಆಶಾದೇವಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಪ್ರಾಧ್ಯಾಪಕ ರುದ್ರೇಶ್ ಅದರಂಗಿ, ಕವಿ ಕಾ.ವೆಂ. ಶ್ರೀನಿವಾಸಮೂರ್ತಿ, ಲೇಖಕಿ ಸುಜಾತ ಎಚ್.ಆರ್. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.