ಯಲಹಂಕ: ’ರಾಜ್ಯಗಳಿಗೆ ಬಾಕಿಯಿರುವ ಜಿಎಸ್‌ಟಿ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷದಷ್ಟೇ ಈ ವರ್ಷವೂ ಪರಿಹಾರ ಸಿಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಬೋಯಿಂಗ್ ಡಿಫೆನ್ಸ್, ಸೆಲ್ಕೋ ಫೌಂಡೇಷನ್ ಹಾಗೂ ಡಾಕ್ಟರ್ಸ್ ಫಾರ್ ಯು ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ವಿದ್ಯುತ್ ನಿಗಮದ ಆವರಣದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್-ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ, ವಿವಿಧ ವಿಭಾಗಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

’ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ವಿಶೇಷ ಸಭೆ ನಡೆಸಿ, ಈ ವಿಚಾರದಲ್ಲಿ ಉಂಟಾಗಿರುವ ರಾಜ್ಯಗಳ ತರಕಾರುಗಳನ್ನು ಬಗೆಹರಿಸಿ, ಶಿಘ್ರದಲ್ಲೇ ಪರಿಹಾರ ಒದಗಿಸಲು ಕ್ರಮಕೈಗೊಳ್ಳಲಾಗುವುದು. ಮುಂಬರುವ ಸಂಸತ್ ಅಧಿವೇಶನದಲ್ಲಿಯೂ ಜಿಎಸ್ಟಿ ಪರಿಹಾರ ಕುರಿತು ವಿಶೇಷಕಲಾಪ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯಗಳ ಜಿಎಸ್ಟಿ ಪರಿಹಾರದ ಬಗ್ಗೆಯೇ ಚರ್ಚೆ ನಡೆಸಲಾಗುತ್ತದೆ‘ ಎಂದು ತಿಳಿಸಿದರು.

ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ವಿಶೇಷವಾದ ಪ್ರತ್ಯೇಕ ವಾರ್ಡ್‌ಗಳನ್ನು ನಿರ್ಮಿಸಲಾಗಿದೆ. ಹೈಟೆಕ್ ಆಸ್ಪತ್ರೆಯಲ್ಲಿ ಇರಬೇಕಾದ ಎಲ್ಲರೀತಿಯ ಸೌಲಭ್ಯಗಳನ್ನು ಈ ಆಸ್ಪತ್ರೆ ಹೊಂದಿದ್ದು, ಇದೇ ಮಾದರಿಯ ಆಸ್ಪತ್ರೆಗಳನ್ನು ವಿವಿಧ ಭಾಗಗಳಲ್ಲಿ ಸ್ಥಾಪಿಸುವಂತೆ ಮನವಿ ಮಾಡಲಾಗುವುದು ಎಂದರು.

ಬೋಯಿಂಗ್ ಡಿಫೆನ್ಸ್ ಇಂಡಿಯಾದ ಅಧ್ಯಕ್ಷ ಸಲೀಲ್ ಗುಪ್ತೆ, ಸೆಲ್ಕೋ ಫೌಂಡೇಷನ್ ಸಂಸ್ಥಾಪಕ ಡಾ.ಹರೀಶ್ ಹಂದೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.