ಬುಧವಾರ, ಸೆಪ್ಟೆಂಬರ್ 30, 2020
21 °C

ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದಲ್ಲಿನ ಪದವಿ ಮತ್ತು ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಕಳೆದ ಮಾರ್ಚ್‌ನಿಂದ ಗೌರವ ಧನ ಪಾವತಿಸಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು ಮತ್ತು ಗೌರವಧನದ ಮೊತ್ತವನ್ನು ಹೆಚ್ಚಿಸಬೇಕು’ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ರಮೇಶ್‌ಬಾಬು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. 

‘ಲಾಕ್‌ಡೌನ್‌ ಕಾರಣ ಮಾ.22ರಿಂದ ಪದವಿ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಬಹಳಷ್ಟು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಆ ತಿಂಗಳ ಗೌರವ ಧನ ನೀಡಿಲ್ಲ, ಕೆಲವು ಕಾಲೇಜುಗಳಲ್ಲಿ ಅರ್ಧ ವೇತನ ಪಾವತಿಸಲಾಗಿದೆ’ ಎಂದು ಅವರು ದೂರಿದ್ದಾರೆ. 

‘ಸಮ್ಮಿಶ್ರ ಸರ್ಕಾರದಲ್ಲಿ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹5ಸಾವಿರ ಹೆಚ್ಚುವರಿ ಗೌರವ ಧನ ನೀಡಲು ತೀರ್ಮಾನವಾಗಿದ್ದರೂ ಜಾರಿ ಆಗಿಲ್ಲ. ಅದನ್ನು ಜಾರಿ ಮಾಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು